July 30, 2025

Newsnap Kannada

The World at your finger tips!

siddarama cm

ಮುಖ್ಯಮಂತ್ರಿಗಳ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಜೆಡಿಎಸ್ ದೂರು

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಲವು ಅಧಿಕಾರಿಗಳಿಂದ ಉಪಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಜೆಡಿಎಸ್ ಆರೋಪಿಸಿದ್ದು, ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಅ.27 ರಂದು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ನಡೆದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಕುರಿತ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಿದ ಹಿನ್ನೆಲೆ, ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪವಿದೆ. ಈ ಕುರಿತು ರಾಜ್ಯ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ಕುಮಾರ್‌ ಅವರು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದ್ದಾರೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ಸಲ್ಲಿಸಲಾದ ದೂರುದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಜೊತೆಗೂಡಿ ಚನ್ನಪಟ್ಟಣ ಉಪಚುನಾವಣೆ ಕುರಿತಂತೆ ಗೃಹಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಈ ಮೂಲಕ ಅವರು ಗೃಹಕಚೇರಿಯ ಸೌಲಭ್ಯಗಳನ್ನು ದುರುಪಯೋಗ ಮಾಡಿಕೊಂಡಿದ್ದು, ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ ಎಂಬ ಆರೋಪ ಮಾಡಲಾಗಿದೆ.ಇದನ್ನು ಓದಿ –ಮುಡಾ ಹಗರಣ – ಮೈಸೂರಿನ ಬಿಲ್ಡರ್ ಮನೆ, ಕಚೇರಿ ಮೇಲೆ ಇಡಿ ದಾಳಿ

ಮಾಧ್ಯಮಗಳಲ್ಲಿ ಈ ಸಭೆಯ ಸುದ್ದಿ ಪ್ರಸಾರವಾದರೂ, ಚುನಾವಣಾಧಿಕಾರಿಗಳು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜೆಡಿಎಸ್ ಆರೋಪಿಸಿದೆ.

error: Content is protected !!