ಸೆ.10ರಂದು ಬೆಂಗಳೂರಿನಲ್ಲಿ ಜೆಡಿಎಸ್ ಬೃಹತ್ ಸಮಾವೇಶ – ಮಾಜಿ ಸಿಎಂ ಕುಮಾರಸ್ವಾಮಿ

Team Newsnap
1 Min Read

ಪಕ್ಷದ ಉಳಿವು, ಗೆಲುವಿಗಾಗಿ ಅವಿರತವಾಗಿ ಶ್ರಮಿಸೋಣ. ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ. ಈ ವಿವೇಕವಾಣಿಯೇ ನಮ್ಮ ಪಾಲಿನ ಮೂಲಮಂತ್ರ ಎಂದು ಕಾರ್ಯಕರ್ತರನ್ನು ಮಾಜಿ ಸಿಎಂ ಕುಮಾರಸ್ವಾಮಿ ಹುರಿದುಂಬಿಸಿದ್ದಾರೆ.

ಮುಂಬರುವ ಲೋಕಸಭೆ, ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ಹಾಗೂ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಇದೇ ಸೆ.10ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಜೆಡಿಎಸ್ ಸಮಾವೇಶ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ನಿಮ್ಮೆಲ್ಲರ ಪ್ರೀತಿ, ಹಾರೈಕೆ, ದೈವದ ಕರುಣೆ, ತಂದೆ ತಾಯಿಯವರ ಆಶೀರ್ವಾದದಿಂದ ನನ್ನ ಆರೋಗ್ಯ ಅತ್ಯುತ್ತಮವಾಗಿ ಸುಧಾರಿಸಿದೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಲ್ಲಿ ಮತ್ತೆ ಸಕ್ರಿಯವಾಗಿ ಭಾಗಿಯಾಗುತ್ತಿದ್ದೇನೆ. ನಾವೆಲ್ಲರೂ ಪಣತೊಟ್ಟು ಹೊರಡೋಣ. ಪಕ್ಷವನ್ನು ಚೈತನ್ಯಶೀಲವಾಗಿ ಮರಳಿ ಕಟ್ಟೋಣ ಎಂದು ತಿಳಿಸಿದ್ದಾರೆ.

ಜನಪರ ನಿಲುವು, ಹೋರಾಟ ನಮ್ಮೆಲ್ಲರ ಹೊಣೆಯಾಗಿದೆ. ಇದು ಈ ಹೊತ್ತಿನ ನೈತಿಕ ಜವಾಬ್ದಾರಿ ಎಂದು ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.ಚುನಾವಣೆಯಲ್ಲಿ ಸೋತಿದ್ದೇವೆ ಆದರೆ ಸೋಲೇ ಕೊನೆಯಲ್ಲ. ಹೋರಾಟದ ಹಾದಿಯಲ್ಲಿ ನಾವೆಲ್ಲರೂ ಸ್ಥೈರ್ಯ ಹಾಗೂ ಅರ್ಪಣಾ ಭಾವದಿಂದ ಹೆಜ್ಜೆ ಹಾಕುವ ಅಗತ್ಯವಿದೆ ಎಂದಿದ್ದಾರೆ.

Share This Article
Leave a comment