ಹೆಚ್.ಡಿ ದೇವೇಗೌಡರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಲ್ಲ. ಜೆಡಿಎಸ್ ಒಂದು ಪೊಲಿಟಿಕಲ್ ಪಾರ್ಟಿನೇ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಿದ್ದು, ನಾಳೆಯ ಕೇಂದ್ರ ಬಜೆಟ್ ಬಗ್ಗೆ ಯಾವ ನಿರೀಕ್ಷೆಯನ್ನೂ ಇಟ್ಟುಕೊಂಡಿಲ್ಲ. ಕೇಂದ್ರದವರು ಆರ್ಥಿಕ ಸರ್ವೇ ಬಗ್ಗೆ ಸುಳ್ಳು ಹೇಳ್ತಾರೆ. ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಜಿಡಿಪಿ ಪಾತಾಳಕ್ಕೆ ಕುಸಿದಿದೆ ಎಂದರು.
ಕೊರೋನಾ ಕಾರಣದಿಂದ ಜಿಡಿಪಿ ಬೆಳವಣಿಗೆ 4.2 ಇತ್ತು. ಸದ್ಯ -7.7 ಇದೆ. ಜಿಡಿಪಿ ಬೆಳವಣಿಗೆ ನಕರಾತ್ಮಕವಾಗಿದೆ ಎಂದು ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ದೇಶದ ಜನತೆಗೆ ಕೇಂದ್ರ ಸರ್ಕಾರ ಜಿಡಿಪಿ ಬೆಳವಣಿಗೆ ಬಗ್ಗೆ ತಪ್ಪು ಮಾಹಿತಿ ನೀಡುತ್ತಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆಯಂತೂ ತಾಂಡವವಾಡ್ತಿದೆ. ನಗರ ಪ್ರದೇಶದಲ್ಲಿ ಶೇ 9.2 ನಿರೋದ್ಯೋಗ ಸಮಸ್ಯೆ ಇದ್ರೆ, ಗ್ರಾಮೀಣ ಪ್ರದೇಶದಲ್ಲಿ ಶೇ 8.9 ಇದೆ. ದೇಶ ಅಭಿವೃದ್ಧಿ ಮಾಡೋಕೆ ಇವರ ಬಳಿ ದುಡ್ಡು ಎಲ್ಲಿದೆ ಎಂದು ವಾಗ್ದಾಳಿ ಮಾಡಿದರು
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
- ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ
- KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
- BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
More Stories
ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ