ಜೆಡಿಎಸ್‌, ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆ :ಶುದ್ಧ ಸುಳ್ಳು- ಕುಮಾರಸ್ವಾಮಿ

Team Newsnap
1 Min Read

ಬಿಜೆಪಿಯೊಂದಿಗೆ ಮೈತ್ರಿ ಅಥವಾ ಜೆಡಿಎಸ್ ಎನ್ ಡಿ ಎ ಜೊತೆ ಸೇರುವುದು ಕಪಟ , ಶುದ್ದ ಸುಳ್ಳು.
ಇಂತಹ ಸುದ್ದಿಗಳನ್ನು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟವಾಗಿ ಹೇಳಿದ್ದಾರೆ.

ಈ ಕುರಿತಂತೆ ಟ್ಟೀಟ್ ಮಾಡಿರುವ ಹೆಚ್ ಡಿ ಕೆ ಬಿಜೆಪಿ ಜೊತೆ ಯಾವುದೇ ಮೈತ್ರಿ ಇಲ್ಲ‌. ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ. ಅದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ ಎಂದು ಹೇಳಿದರು.

ಬಿಜೆಪಿ ಕಪಟ ನಾಟಕ

ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಜೆಡಿಎಸ್‌ ಎನ್‌ಡಿಎ ಜೊತೆ ಹೋಗುವುದಿಲ್ಲ. ಇಂತಹ ಸುದ್ದಿಗಳು ಕಪೋಲ ಕಲ್ಪಿತ. ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು ಎಂದಿದ್ದಾರೆ.

ನನಗೆ ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯವೂ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್‌ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ ಎಂದು ಎಚ್ಚರಿಸಿದರು.

ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್‌ ಕಾರ್ಯಕರ್ತರು, ಜೆಡಿಎಸ್‌ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Share This Article
Leave a comment