ಧಾರವಾಡದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಕೋನರೆಡ್ಡಿ ನಾಳೆ ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುತ್ತೇನೆ ಎಂದು ಘೋಷಿಸಿದರು.
ನನ್ನ ಬೆಂಬಲಿಗರ, ಕಾರ್ಯಕರ್ತರ ತೀರ್ಮಾನದಂತೆ ಈಗ ಕಾಂಗ್ರೆಸ್ ಸೇರುತ್ತಿದ್ದೇನೆ. ನನ್ನೊಂದಿಗೆ ನವಲಗುಂದ ಪುರಸಭೆ ಸದಸ್ಯರು, ಕೆಲ ಗ್ರಾಮ ಪಂಚಾಯಿತಿ ಸದಸ್ಯರು ಬರುತ್ತಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸೋತಿದ್ದೆ, ಆಗಿನಿಂದಲೇ ಕ್ಷೇತ್ರದ ಜನ ಜೆಡಿಎಸ್ ಬಿಡಲು ಹೇಳುತ್ತಿದ್ದರು ಎಂದರು.
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮೇಲೆ ನನಗೆ ಅಪಾರ ಗೌರವವಿದೆ. ಅವರಿಗೂ ಸೂಕ್ಷ್ಮವಾಗಿ ಮೊದಲೇ ತಿಳಿಸಿದ್ದೇನೆ. ಕ್ಷೇತ್ರದ ಜನರ ಒತ್ತಾಯದಿಂದ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು