February 22, 2026

Newsnap Kannada

The World at your finger tips!

managuli

ಜೆಡಿಎಸ್‌ ಶಾಸಕ ಎಂ ಸಿ ಮನಗೂಳಿ ವಿಧಿವಶ

Spread the love

ವಿಜಯಪುರ ಜಿಲ್ಲೆ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ(85) ವಿಧಿವಶರಾಗಿದ್ದಾರೆ.

ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ ಅವರು ಪತ್ನಿ, ಓರ್ವ ಪುತ್ರಿ, ನಾಲ್ವರು ಪುತ್ರರು ಸೇರಿ ಅಪಾರ ಬಂಧು ಬಳಗ ಅಗಲಿದ್ದಾರೆ.

ಏನಾಗಿತ್ತು ?

ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಕಳೆದ 15 ದಿನಗಳ ಹಿಂದೆ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ತಡರಾತ್ರಿ 1 ಗಂಟೆ ವೇಳೆಗೆ ಕೊನೆಯುಸಿರೆಳೆದರು.

ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಮನಗೂಳಿ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಸೆಪ್ಟಂಬರ್ 29, 1937 ರಂದು ಜನಿಸಿದ್ದ ಅವರು 1994 ರಲ್ಲಿ ಮೊದಲ ಬಾರಿಗೆ ಜನತಾದಳದಿಂದ ಶಾಸಕರಾಗಿದ್ದರು. 7 ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಮನಗೂಳಿ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ , ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

error: Content is protected !!