ಕಾವೇರಿ ನೀರಿನ ಹಕ್ಕಿನ ಹೋರಾಟಕ್ಕೆ ಜೆಡಿಎಸ್ ಬೆಂಬಲ – ಧರಣಿಗೆ ಸಾಥ್ ನೀಡಿದ ಮಾಜಿ ಸಚಿವರು

Team Newsnap
1 Min Read

ಮಂಡ್ಯ : ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಆದೇಶ ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ ಹಾಗೂ ಕರ್ನಾಟಕದ ಹಿತ ಕಾಯಲು ವಿಫಲವಾಗಿರುವ ಕೇಂದ್ರ – ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ನಿರಂತರ ಧರಣಿಗೆ ಜಾತ್ಯತೀತ ಜನತಾದಳ ಪಕ್ಷದ ಮಾಜಿ ಸಚಿವರುಗಳು ಬೆಂಬಲ ಸೂಚಿಸಿದರು.

ಮಂಡ್ಯ ಸರ್ ಎಂ ವಿ ಪ್ರತಿಮೆ ಎದುರು ನಿರಂತರ ಧರಣಿಯಲ್ಲಿ ಮಾಜಿ ಸಚಿವರಾದ ಸಿ ಎಸ್ ಪುಟ್ಟರಾಜು, ಡಿ.ಸಿ ತಮ್ಮಣ್ಣ ಭಾಗಿಯಾಗಿ ಕಾವೇರಿ ಹೋರಾಟ ಬೆಂಬಲಿಸಿದರು.

ಈ ವೇಳೆ ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ಮಾತನಾಡಿ, ಕಾವೇರಿ ನದಿ ನೀರಿನ ವಿಚಾರವಾಗಿ ಹಲವು ದಿನಗಳಿಂದ ಹೋರಾಟ ನಡೆಯುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಷ್ಟ ಭರವಸೆ ನೀಡಿಲ್ಲ ಇದರಿಂದ ರೈತರು ನ್ಯಾಯ ಸಿಗುವವರೆಗೂ ಹೋರಾಟ ಮಾಡುವುದಾಗಿ ತಿಳಿಸಿದ್ದು, ಇವರ ಹೋರಾಟಕ್ಕೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದರು.

ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಪಕ್ಷದ ವತಿಯಿಂದ ದೊಡ್ಡ ಮಟ್ಟದ ಹೋರಾಟ ಮಾಡಲು ಮುಂದಾಗಿದ್ದೇವೆ, ರೈತರ ಜೊತೆಗೂಡಿ ಸರ್ಕಾರದ ಕಣ್ಣು ತೆರೆಸಲು ಪ್ರತಿಭಟಿಸಲಾಗುವುದೆಂದು ಹೇಳಿದರು.

ಮಾಜಿ ಸಚಿವ ಡಿಸಿ ತಮ್ಮಣ್ಣ ಮಾತನಾಡಿ, ಮುಖ್ಯಮಂತ್ರಿ ರೈತ ಸಮೂಹಕ್ಕೆ ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿಲ್ಲ, ಕೇಂದ್ರ ಸರ್ಕಾರ ಅಥವಾ ಪ್ರಧಾನ ಮಂತ್ರಿ ಬಳಿಗೆ ತೆರಳಿ ಪರಿಹಾರ ದೊರಕಿಸಿ ಕೊಡುವುದಾಗಿ ಖಚಿತ ಸಂದೇಶ ನೋಡಿಲ್ಲ ಎಂದು ಹೇಳಿದರು.ಸರ್ಕಾರಿ ಅಧಿಕಾರಿ ಪ್ರತಿಮಾ ಕೊಲೆ : ತಪ್ಪೊಪ್ಪಿಕೊಂಡ ಕಾರು ಚಾಲಕ ಕಿರಣ್

ಕಾಂಗ್ರೆಸ್ ಸರ್ಕಾರದ ಸಚಿವರು, ಶಾಸಕರು ಕಾವೇರಿ ವಿಚಾರದಲ್ಲಿ ದನಿ ಎತ್ತಿಲ್ಲ ಹಾಗಾಗಿ ಹೋರಾಟಗಾರರು ಅಧಿವೇಶನದಲ್ಲಿ ಚರ್ಚೆ ಆದರೂ ಆಗಲಿ ಎಂದು ಒತ್ತಾಯಿಸಿದರು.

Share This Article
Leave a comment