February 16, 2026

Newsnap Kannada

The World at your finger tips!

devegowda

ಜೆಡಿಎಸ್ ವರಿಷ್ಠ ರಿಂದ ನೆರೆ ಪ್ರವಾಹ ಕುರಿತು ದಕ್ಷಿಣ ಜಿಲ್ಲೆ ಗಳ ನಾಯಕರ ಸಭೆ

Spread the love

ರಾಜ್ಯದ ಬಹುತೇಕ ಜಿಲ್ಲೆಗಳು ಕಳೆದ ಎರಡು ವರ್ಷಗಳಿಂದ ನೆರೆ ಹಾವಳಿಯಿಂದ ತತ್ತರಿಸಿದ್ದು ಸರ್ಕಾರವು ನೊಂದವರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಕಲ್ಪಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾದ ಹಿನ್ನಲೆಯಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ‌ ನೀಡಿ ವಸ್ತು ಸ್ಥಿತಿ ಯನ್ನು ಅರಿಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ರು ಶನಿವಾರ ವೀಡಿಯೋ ಸಂವಾದವನ್ನು ನಡೆಸಿದರು.
ಮಂಡ್ಯ, ಮೈಸೂರು, ಹಾಸನ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು

kumaraswamy

ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಶಾಸಕರು, ತಾಲೂಕು ಅಧ್ಯಕ್ಷರು ಮತ್ತು ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡರು, ಮಾಜಿ‌ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿಯವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿಯವರು ಸಭೆ ನಡೆಸಿದರು.

error: Content is protected !!