ಫಿಲಡೆಲ್ಫಿಯ ಬಳಿ ಶನಿವಾರ (ಫೆಬ್ರವರಿ 1) ಭಾರಿ ಅನಾಹುತ ಸಂಭವಿಸಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದ ವೈದ್ಯಕೀಯ ಸಾರಿಗೆ ಜೆಟ್ ವಿಮಾನ ಪತನಗೊಂಡಿದೆ. ಈ ದುರಂತದಲ್ಲಿ ಮಗುವಿನೊಂದಿಗೆ ಕುಟುಂಬಸ್ಥರು ಸೇರಿ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವಿಮಾನವು ಶಾಪಿಂಗ್ ಮಾಲ್ ಸಮೀಪ ಪತನಗೊಂಡ ಕಾರಣ ಸುತ್ತಮುತ್ತಲಿನ ಹಲವಾರು ಮನೆಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪ್ರಾಣಾಪಾಯದಿಂದ ಯಾರಾದರೂ ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ವಿಮಾನ ಕಂಪನಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸಾಲು ಸಾಲು ಮನೆಗಳ ಮೇಲೆ ವಿಮಾನ ಅಪಘಾತಗೊಂಡಿದ್ದು, ಮನೆಯೊಳಗಿನ ಸಾವು-ನೋವಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಅಪಘಾತ ನಡೆದ ಪ್ರದೇಶದ ರಸ್ತೆಗಳನ್ನ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನು ಓದಿ –2.5 ಲಕ್ಷ ಲಂಚ ಸ್ವೀಕಾರ – ಇಬ್ಬರು ಗ್ರಾಮ ಲೆಕ್ಕಾಧಿಕಾರಿಗಳು ಲೋಕಾಯುಕ್ತ ಬಲೆಗೆ
ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಈ ಅಪಘಾತದಲ್ಲಿ ಅಮೂಲ್ಯ ಜೀವಗಳು ಕಳೆದುಹೋಗಿವೆ” ಎಂದು ಎಕ್ಸ್ (ಹಳೆಯ ಟ್ವೀಟರ್) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಘಟನೆ ಸ್ಥಳದಲ್ಲಿ ಅಧಿಕಾರಿಗಳು ಅಗತ್ಯ ಕಾರ್ಯಾಚರಣೆ ನಡೆಸುತ್ತಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು