JNU ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಜಾಮೀನು ಅರ್ಜಿ ವಜಾ

Team Newsnap
1 Min Read

JNU ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ಕರ್ಡೂಮಾ ಹೆಚ್ಚುವರಿ ಸೆಷನ್ಸ್ ನ್ಯಾಯಲಯ ತಿರಸ್ಕರಿಸಿದೆ.

ಎಂಟು ತಿಂಗಳ ಸುದೀರ್ಘ ವಿಚಾರಣೆ ಬಳಿಕ ಇಂದು ನ್ಯಾ.ಅಮಿತಾಭ್ ರಾವತ್ ತೀರ್ಪು ಪ್ರಕಟಿಸಿದ್ದಾರೆ.

2020ರ ಫೆಬ್ರವರಿ 20 ರಂದು ದೆಹಲಿಯಲ್ಲಿ ನಡೆದ ಕೋಮು ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್‍ನನ್ನು ಬಂಧಿಸಲಾಗಿದೆ

ಈ ಗಲಭೆ ಪ್ರಕರಣದಲ್ಲಿ ಒಳಸಂಚು ಮಾಡಿರುವುದಾಗಿ ಆರೋಪಿಸಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಪ್ರಕರಣ ದಾಖಲಿಸಲಾಗಿತ್ತು. ಬಂಧನ ಬಳಿಕ ಖಾಲಿದ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಖಾಲಿದ್ ಪರ ವಾದ ಮಂಡಿಸಿದ್ದ ವಕೀಲ ತ್ರಿದೀಪ್ ಪೈಸ್, ಇದೊಂದು ಉದ್ದೇಶಪೂರ್ವಕವಾಗಿ ದಾಖಲಿಸಿದ ಪ್ರಕರಣವಾಗಿದೆ.

ಪೊಲೀಸರು ಕಟ್ಟುಕಥೆಯೊಂದನ್ನು ಕಟ್ಟಿದ್ದಾರೆ. ಖಾಲಿದ್ ವಿರುದ್ಧದ ಸಾಕ್ಷಿ ಹೇಳಿಕೆಗಳು ಅಸಮಂಜಸವಾಗಿದೆ ಮತ್ತು ಆರೋಪಪಟ್ಟಿ ದೂರದರ್ಶನ ಧಾರಾವಾಹಿ ಸ್ಕ್ರಿಪ್ಟ್ ಅನ್ನು ಹೋಲುತ್ತದೆ ಎಂದು ವಾದಿಸಿದರು.

ಪ್ರತಿವಾದ ಮಂಡಿಸಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪ್ರಸಾದ್, ದೆಹಲಿ ಗಲಭೆಯು ಆರೋಪಿಗಳು ರೂಪಿಸಿದ ಪೂರ್ವಯೋಜಿತ ಆಳವಾದ ಸಂಚಿನ ಭಾಗವಾಗಿದೆ.

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭೇಟಿಯನ್ನು ಪ್ರಸ್ತಾಪಿಸಿದ ಪ್ರಾಸಿಕ್ಯೂಟರ್, ಅಂತರರಾಷ್ಟ್ರೀಯ ಮಾಧ್ಯಮಗಳಿಗೆ ಗುರಿಯಾಗುವ ವಾತಾವರಣವನ್ನು ಸೃಷ್ಟಿಸಲು ಖಾಲಿದ್ ಪ್ರಯತ್ನಿಸಿದರು ಎಂದು ವಾದಿಸಿದರು.

Share This Article
Leave a comment