ಜೋ ಬೈಡೆನ್ ಚುನಾವಣೆ ಕಣದಿಂದ ಹಿಂದಕ್ಕೆ : ಕಮಲಾ ಹ್ಯಾರಿಸ್ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ

Team Newsnap
1 Min Read

ವಾಷಿಂಗ್ಟನ್ : ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡೆನ್ ,ಅಮೆರಿಕದ ಅಧ್ಯಕ್ಷ ಸ್ಥಾನದ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು ,ತಮ್ಮ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಸ್ವಪಕ್ಷೀಯರೇ ಅವರ ಉಮೇದುವಾರಿಕೆಯನ್ನು ವಿರೋಧಿಸತೊಡಗಿದ್ದು ,ತಿಸ್ಪರ್ಧಿ ಡೊನಾಲ್ಡ್ ಟ್ರಂಪ್​ರನ್ನು ಎದುರಿಸುವ ಸಾಮರ್ಥ್ಯ ಬೈಡೆನ್ ಅವರಿಗಿಲ್ಲ ಎಂದು ನೇರವಾಗಿ ಟೀಕಿಸಿದ್ದಾರೆ.

ಇದೀಗ ಅಧ್ಯಕ್ಷೀಯ ಚುನಾವಣೆಗೆ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಿಂದ ಹಾಲಿ ಅಧ್ಯಕ್ಷ, ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡೆನ್ ಹಿಂದೆ ಸರಿಯುತ್ತಿದ್ದಂತೆಯೇ ಅವರ ಸ್ಥಾನದಲ್ಲಿ ಉಮೇದುವಾರಿಕೆಗೆ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಸ್ಪರ್ಧಿಸುವುದು ಖಚಿತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಿರ್ಧಾರ ಪ್ರಕಟಿಸಿರುವ ಬೈಡೆನ್ ಅದರ ಜತೆಗೇ ಕಮಲಾ ಹ್ಯಾರಿಸ್ ಅವರನ್ನು ಅಭ್ಯರ್ಥಿ ಮಾಡುವಂತೆ ಪಕ್ಷಕ್ಕೆ ಶಿಫಾರಸು ಮಾಡಿದ್ದಾರೆ.ಇದನ್ನು ಓದಿ –ಗಂಗಾರತಿಯ ರೀತಿ ʻಕಾವೇರಿ ಆರತಿʼ ನಡೆಸಲು ತೀರ್ಮಾನ : ಡಿಕೆಶಿ

‘ನವೆಂಬರ್ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಉಳಿದ ಅಧ್ಯಕ್ಷಾವಧಿಯನ್ನು ನನ್ನ ಪಾಲಿನ ಕರ್ತವ್ಯ ಮುಗಿಸಲು ಬಳಸುತ್ತೇನೆ. 2020ರಲ್ಲಿ ನಾನು ಅಭ್ಯರ್ಥಿ ಆಗುತ್ತಿದ್ದಂತೆಯೇ ಉಪಾಧ್ಯಕ್ಷ ಸ್ಥಾನಕ್ಕೆ ಕಮಲಾ ಹ್ಯಾರಿಸ್ ಅವರ ಹೆಸರನ್ನು ನಾನೇ ಸೂಚಿಸಿದ್ದೆ. ಅದು ನನ್ನ ಅತ್ಯುತ್ತಮ ನಿರ್ಧಾರಗಳಲ್ಲಿ ಒಂದಾಗಿತ್ತು. ಈಗ ಬದಲಾದ ಪರಿಸ್ಥಿತಿಯಲ್ಲಿ ಕಮಲಾ ಹ್ಯಾರಿಸ್ ಅವರ ಹೆಸರನ್ನು ಅಧ್ಯಕ್ಷೀಯ ಪದವಿಯ ಉಮೇದುವಾರಿಕೆಗೆ ಸೂಚಿಸುತ್ತಿದ್ದೇನೆ. ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇನೆ. ಪ್ರತಿಸ್ಪರ್ಧಿ ಟ್ರಂಪ್ ಅವರನ್ನು ನಾವೆಲ್ಲ ಒಗ್ಗಟ್ಟಿನಿಂದ ಸೋಲಿಸೋಣ. ಅಮೆರಿಕದ ಹಿತ ಕಾಯುವ ಸಲುವಾಗಿ ನಾವು ಈ ಕೆಲಸವನ್ನು ಮಾಡಬೇಕಾಗಿದೆ’ ಎಂದು ಜೋ ಬೈಡೆನ್ ಸಂದೇಶದಲ್ಲಿ ತಿಳಿಸಿದ್ದಾರೆ.

Share This Article
Leave a comment