ನನ್ನ ನಂಬಿ ಬಂದವರು ಅತಂತ್ರ ಆಗಬಾರದು ಎಂಬ ಕಾರಣಕ್ಕಾಗಿ ಜೆಡಿಎಸ್ ತೊರೆದು ನಂಬಿದವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಜೆಡಿಎಸ್ ಮಾಜಿ ಶಾಸಕ ವೈಎಸ್‌ವಿ ದತ್ತ ಹೇಳಿದರು.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಕುರಿತು ಸುದ್ದಿಗಾರರ ಜೊತೆ ಮಾತನಾಡಿರುವ ದತ್ತ, ನನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದುದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ. ನಾನು ದೇವೇಗೌಡರು ಇರುವವರೆಗೂ ಅವರ ಜೊತೆ ಇರುತ್ತೇನೆ ಎಂದು ಹೇಳಿದ್ದೆ. ‘ಅನುಭವʼ ಚಿತ್ರದ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ
ಆದರೆ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಒತ್ತಾಯಿಸಿದ್ದಾರೆ. ನಾನು ದೇವೇಗೌಡರಿಗೆ ಈ ವಿಚಾರ ಹೇಳಲು ಹೋಗಿ ವಾಪಸ್ ಬಂದಿದ್ದೇನೆ ಎಂದರು.
ನಮ್ಮ ಕ್ಷೇತ್ರದ ಕೋಮುವಾದಿಗಳ ಜೊತೆ ಸೆಣಸಬೇಕು ಅಂದ್ರೆ ಕಾಂಗ್ರೆಸ್ ಸೇರಬೇಕು ಎಂಬುದು ನಮ್ಮ ಕಾರ್ಯಕರ್ತರು ಮತ್ತು ಕ್ಷೇತ್ರದ ಜನರ ಒತ್ತಾಯವಾಗಿದೆ ಎಂದು ತಿಳಿಸಿದರು.
ಜೆಡಿಎಸ್ ಗೆ ರಾಜೀನಾಮೆ ನೀಡುತ್ತಿದ್ದು,ಶೀಘ್ರವೇ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದಾರೆ.
ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್ ವಿ ದತ್ತ ಅವರು ಡಿಸೆಂಬರ್ 15 ರ (ನಾಳೆ) ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಡಿಸೆಂಬರ್ 17 ರಂದು ಬೆಳ್ತಂಗಡಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ