October 7, 2022

Newsnap Kannada

The World at your finger tips!

ju ntr amith

Jr NTR​​- ಅಮಿತ್ ಶಾ ಮಾತುಕತೆ – ರಾಜಕೀಯ ವಲಯದಲ್ಲಿ ಸಂಚಲನ

Spread the love

ತೆಲುಗು ಚಿತ್ರರಂಗದ ನಟ ಜೂನಿಯರ್ ಎನ್‌ಟಿಆರ್ ಅವರನ್ನು ಭಾನುವಾರ ಸಂಜೆ ಹೈದರಾಬಾದ್​​ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಭೇಟಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅಮಿತ್ ಶಾ.. ಇಂದು ನಾನು ತೆಲುಗು ಚಿತ್ರರಂಗದ ಪ್ರತಿಭಾವಂತ ನಟನನ್ನು ಭೇಟಿಯಾದೆ. ನಮ್ಮಿಬ್ಬರ ನಡುವೆ ಉತ್ತಮ ಚರ್ಚೆ ನಡೆಯಿತು ಎಂದು ಬರೆದುಕೊಂಡಿದ್ದಾರೆ.

ತೆಲಂಗಾಣದ ಮುನುಗೋಡೆಯಲ್ಲಿ ಉಪ ಚುನಾವಣೆ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಇನ್ನು ಹೈದರಾಬಾದ್‌ನಲ್ಲಿ ವಾಸಿಸುತ್ತಿರುವ ಜೂನಿಯರ್ ಎನ್‌ಟಿಆರ್, 2009 ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಟಿಡಿಪಿ ಪರ ಪ್ರಚಾರ ಮಾಡಿದ್ದರು. ಇದೀಗ ಅಮಿತ್​ ಶಾ ಅವರನ್ನು ಭೇಟಿ ಮಾಡಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿದೆ.

error: Content is protected !!