ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು ಸೆಪ್ಟಂಬರ್ 12 ಕ್ಕೆ

Team Newsnap
1 Min Read

ಜ್ಞಾನವಾಪಿ ಮಸೀದಿ-ಶೃಂಗಾರ್ ಗೌರಿ ಕಾಂಪ್ಲೆಕ್ಸ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯವು ಸೆಪ್ಟೆಂಬರ್ 12ಕ್ಕೆ ತೀರ್ಪನ್ನು ಕಾಯ್ದಿರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯವರು ತಮ್ಮ ವಾದವನ್ನು ಮುಕ್ತಾಯಗೊಳಿಸಿದ್ದಾರೆ.

ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಆದೇಶವನ್ನು ಸೆಪ್ಟೆಂಬರ್ 12ಕ್ಕೆ ಕಾಯ್ದಿರಿಸಿದರು ಎಂದು ಹಿಂದೂಗಳ ಪರ ವಕೀಲ ಮದನ್ ಮೋಹನ್ ಯಾದವ್ ತಿಳಿಸಿದ್ದಾರೆ.

ಈ ಮಧ್ಯೆ ಮಸೀದಿಯ ಹೊರಗೋಡೆಯ ಮೇಲೆ ವಿಗ್ರಹಗಳಿರುವ ಹಿಂದೂ ದೇವತೆಗಳ ದೈನಂದಿನ ಪೂಜೆಗೆ ಅನುಮತಿ ನೀಡುವಂತೆ ಕೋರಿ ಐವರು ಮಹಿಳೆಯರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಜ್ಞಾನವಾಪಿ ಮಸೀದಿ; ಶಿವಲಿಂಗ ಪತ್ತೆಯಾದ ಸ್ಥಳ ನಿರ್ಬಂಧಿಸಲು ಆದೇಶ

ಈ ಪ್ರಕರಣದಲ್ಲಿ ಅಂಜುಮನ್ ಇಂತಿಜಾಮಿಯಾ ಮಸೀದಿ ಸಮಿತಿಯನ್ನು ಪ್ರತಿನಿಧಿಸಿದ ವಕೀಲ ಶಮೀಮ್ ಅಹ್ಮದ್, ಜ್ಞಾನವಾಪಿ ಮಸೀದಿ ವಕ್ಫ್ ಆಸ್ತಿಯಾಗಿದ್ದು, ನ್ಯಾಯಾಲಯಕ್ಕೆ ಈ ವಿಷಯವನ್ನು ಕೇಳುವ ಹಕ್ಕು ಇಲ್ಲ. ಮಸೀದಿಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಆಲಿಸುವ ಹಕ್ಕು ವಕ್ಫ್ ಮಂಡಳಿಗೆ ಮಾತ್ರ ಇದೆ ಎಂದು ವಾದಿಸಿದರು.

ವಾದದ ಬಗ್ಗೆ ಮದನ್ ಮೋಹನ್ ಯಾದವ್ ಪ್ರತಿಕ್ರಿಯೆ ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ಮುಸ್ಲಿಂ ಪರ ವಕೀಲರು ತಮ್ಮ ಹಳೆಯ ಹೇಳಿಕೆಗಳನ್ನು ಪುನರಾವರ್ತಿಸಿದ್ದಾರೆ ಎಂದು ಹಿಂದೂ ಪರ ವಕೀಲ ಮದನ್ ಮೋಹನ್ ಯಾದವ್ ಹೇಳಿದರು.

ಇನ್ನೊಂದು ಕಡೆಯವರು ಹಾಜರುಪಡಿಸಿದ ದಾಖಲೆಗಳು ಒಂದು ಅಲಮ್ಗೀರ್ ಮಸೀದಿಯ ದಾಖಲೆಗಳಾಗಿವೆ. ಅದು ದೇವಾಲಯವನ್ನು ಕೆಡವಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ನಾವು ನ್ಯಾಯಾಲಯಕ್ಕೆ ತಿಳಿಸಿದ್ದೇವೆ ಎಂದು ಯಾದವ್ ಹೇಳಿದರು.

ಪೊಲೀಸ್ ನಿಯಂತ್ರಣಕ್ಕೆ ಮಸೀದಿಯ ಒಂದು ಕಾಂಪ್ಲೆಕ್ಸ್

ಕಳೆದ 1992 ರಲ್ಲಿ ಉತ್ತರ ಪ್ರದೇಶ ಸರ್ಕಾರ ಮತ್ತು ವಕ್ಫ್ ಮಂಡಳಿ ನಡುವಿನ ಒಪ್ಪಂದದ ನಂತರ ಜ್ಞಾನವಾಪಿ ಕಾಂಪ್ಲೆಕ್ಸ್ ಒಂದು ಭಾಗವನ್ನು ಪೊಲೀಸ್ ನಿಯಂತ್ರಣ ಕೊಠಡಿಯಾಗಿ ಪರಿವರ್ತಿಸಲಾಯಿತು ಎಂದು ಮುಸ್ಲಿಂ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

Share This Article
Leave a comment