ಹುಬ್ಬಳ್ಳಿಯಲ್ಲಿ ವಿವಾದಿತ ಪೋಸ್ಟ್ ಮಾಡಿ ಹುಬ್ಬಳ್ಳಿ ಗಲಾಟೆಗೆ ಕಾರಣವಾದ ಅಭಿಷೇಕ್‍ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹುಬ್ಬಳ್ಳಿ ಜೆಎಂಎಫ್‌ಸಿ ನ್ಯಾಯಾಲಯ ಈ ಆದೇಶ ಮಾಡಿದೆ.
ವಿವಾದಿತ ಪೋಸ್ಟ್ ಮಾಡಿದ್ದ ಅಭಿಷೇಕ್ ಹಿರೇಮಠ ಪರ ವಕೀಲ ಸಂಜಯ ಬಡಾಸಕರ್ ಜಾಮೀನು ಅರ್ಜಿ ಸಲ್ಲಿಸಿದ್ದರು.
ಅಭಿಷೇಕ್‍ನನ್ನು ಏಪ್ರಿಲ್ 30 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ, ನಾಳೆ ಸರ್ಕಾರದ ಪರ ವಕೀಲರು ಜಾಮೀನಿಗೆ ತಕರಾರು ಸಲ್ಲಿಸಲಿದ್ದಾರೆ.
ಅಭಿಷೇಕ್ ಪಿಯುಸಿ 2 ನೇ ವರ್ಷದ ಪರೀಕ್ಷೆ ಬರೆಯಲಿರುವ ಕಾರಣ ನ್ಯಾಯಾಲಯದ ಗಮನಕ್ಕೆ ತಂದಿದ್ದೆವೆ, ನಾಳೆ ಈ ಬಗ್ಗೆ ಅರ್ಜಿ ಕೂಡ ಕೊಡಲಿದ್ದೇವೆ ಎಂದು ವಕೀಲರು ತಿಳಿಸಿದರು.
ಗಲಭೆ ಪ್ರಕರಣ ಸಂಬಂಧ ಪೋಲಿಸ್ ತನಿಖೆ ಇಂದು ಮತ್ತಷ್ಟು ಚುರುಕಾಗಿದೆ. ಈಗಾಗಲೇ ನೂರಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಗಲಾಟೆ ಮಾಡಿ ಎಸ್ಕೇಪ್ ಆಗಿದ್ದವರ ಹೆಡೆಮುರಿ ಕಟ್ಟೋಕೆ ಎರಡೂ ಟೀಂಗಳು ಕಾರ್ಯಾಚರಣೆ ನಡೆಸಿವೆ. ಗಲಭೆ ಮಾಡಿದ್ದ ಕೆಲ ಪುಂಡರು ಎಸ್ಕೇಪ್ ಆದ ಹಿನ್ನೆಲೆಯಲ್ಲಿ ಅವರ ಪತ್ತೆ ಕಾರ್ಯ ಚುರುಕಾಗಿದೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು