December 23, 2024

Newsnap Kannada

The World at your finger tips!

cheluvarayaswamyy

ಜೂನ್ 7 ರಿಂದ 9 ರವರೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಎನ್.ಚಲುವರಾಯಸ್ವಾಮಿ

Spread the love

ಮಂಡ್ಯ : ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜೂನ್ 7 ರಿಂದ 9 ರವರೆಗೆ 3 ದಿನಗಳ ಕಾಲ ನಡೆಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಬಂಧ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.

ಮಂಡ್ಯ ಜಿಲ್ಲೆಯಲ್ಲಿ ಈ ಹಿಂದೆ 1974 ರಲ್ಲಿ ಮೊದಲನೇ ಬಾರಿಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿರುತ್ತದೆ. ಎರಡನೇ ಬಾರಿಗೆ 1994 ರಲ್ಲಿ ನಡೆದಿದೆ. ಈ ಐತಿಹಾಸಿಕ ಸಮ್ಮೇಳನವನ್ನು ನಡೆಸಿದ್ದರಿಂದ ಕುರುಹಿನಲ್ಲಿ ಜಿಲ್ಲೆಯಲ್ಲಿ 3ನೇ ಬಾರಿಗೆ 30 ವರ್ಣಗಳ ನಂತರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಅವಕಾಶ ಸಿಕ್ಕಿರುವುದು ಮಂಡ್ಯ ಜಿಲ್ಲೆಯ ಸೌಭಾಗ್ಯವಾಗಿದೆ ಎಂದರು.

ಸಮ್ಮೇಳನ ಯಶಸ್ವಿಯಾಗಿ ನಡೆಸಲು ಜಿಲ್ಲೆಯ ಹಿರಿಯ ಸಾಹಿತಿಗಳು ಕನ್ನಡ ಅಭಿಮಾನಿಗಳು ಸಾಹಿತ್ಯ ಪ್ರೇಮಿಗಳು ಜನಪ್ರತಿನಿಧಿಗಳು ಹಿರಿಯ ಸಾಹಿತ್ಯಾಸಕ್ತರ ಪಾಲ್ಗೊಳ್ಳುವಿಕೆ ಅಮೂಲ್ಯವಾಗಿದೆ. ಈ ನಿಟ್ಟಿನಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ತು, ಕೇಂದ್ರ ಸಾಹಿತ್ಯ ಪರಿಷತ್ತಿನ ಸಲಹೆಗಳೊಂದಿಗೆ ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸಲು ಎಲ್ಲರನ್ನೂ ಒಳಗೊಂಡಂತೆ 25 ಸಮಿತಿಗಳನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದರು.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಮಕ್ಷಮದಲ್ಲಿ ಸಮ್ಮೇಳನ ನಡೆಸಲು ಸೂಕ್ತ ಸ್ಥಳವನ್ನು ಅಂತಿಮಗೊಳಿಸಲಾಗುವುದು. ಮಾನ್ಯ ಮುಖ್ಯಮಂತ್ರಿಗಳು ಸಮ್ಮೇಳನದ ವೆಚ್ಚವನ್ನು ಬಿಡುಗಡೆ ಮಾಡಲು ಭರವಸೆ ನೀಡಿದ್ದಾರೆ. ಅದರಂತೆ ವಿವಿಧ ಸಮಿತಿಗಳ ನೇಮಕಮಾಡಿ ಸಮಿತಿಗಳು ಆಂತರಿಕವಾಗಿ ಸಭೆ ನಡೆಸಿ ಅಂತಿಮವಾಗಿ ಆಗಬಹುದಾದ ವೆಚ್ಚದ ಅಂದಾಜು ಮೊತ್ತವನ್ನು ಮಖ್ಯ ಸಮಿತಿಗೆ ಸಲ್ಲಿಸುತ್ತಾರೆ ಎಂದರು.

ಸಮ್ಮೇಳನದಲ್ಲಿ ಸ್ವಾಗತ ಸಮಿತಿ, ಸಮನ್ವಯ ಸಮಿತಿ, ಹಣಕಾಸು ಮತ್ತು ಲೆಕ್ಕ ಪರಿಶೋಧನಾ ಸಮಿತಿ, ವೇದಿಕೆ ಸಮಿತಿ, ಆಹಾರ ಮತ್ತು ಮೆರವಣಿಗೆ, ವಸತಿ, ಆರೋಗ್ಯ ಮತ್ತು ನೈರ್ಮಲ್ಯ, ಸಾಂಸ್ಕೃತಿಕ ಸಾರಿಗೆ, ನಗರ ಅಲಂಕಾರ ವಿದ್ಯುತ್, ಪುಸ್ತಕ ಬಿಡುಗಡೆ, ಪ್ರಚಾರ, ಆಮಂತ್ರಣ, ಸ್ಮರಣಿಕೆ, ಮಾಧ್ಯಮ ಮತ್ತು ಶಿಷ್ಟಾಚಾರ ಸೇರಿದಂತೆ 25 ಸಮಿತಿಗಳನ್ನು ರಚಿಸಲಾಗುವುದು ಎಂದರು.

ಸಮ್ಮೇಳನದಲ್ಲಿ ಕವಿ ಗೋಷ್ಠಿ, ಉಪನ್ಯಾಸ, ಪುಸ್ತಕ ಮಳಿಗೆ ಆಯೋಜಿಸಲು ಹಾಗೂ ಪ್ರತಿನಿತ್ಯ ಸಮ್ಮೇಳನ ಸುಮಾರು 3 ರಿಂದ 4 ಲಕ್ಷ ಜನ ಸೇರುವ ನಿರೀಕ್ಷೆ ಇದ್ದು, ವಸತಿ ಹಾಗೂ ಊಟದ ವ್ಯವಸ್ಥೆಗೆ ಯೋಜಿಸಲಾಗಿದೆ ಎಂದರು.‘KRS ಡ್ಯಾಂ’ ಸುತ್ತಮುತ್ತ ‘ಗಣಿಗಾರಿಕೆ ನಿಷೇಧ’ – ‘ಜಿಲ್ಲಾಡಳಿತ’ ಆದೇಶ

ಸಭೆಯಲ್ಲಿ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಸಿಇಒ ಶೇಖ್ ತನ್ವೀರ್ ಆಸಿಫ್, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Copyright © All rights reserved Newsnap | Newsever by AF themes.
error: Content is protected !!