ಮಂಡ್ಯ: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು (ಕೆ-ಸೆಟ್) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಶೀಘ್ರವೇ ನಡೆಸಲು ಕ್ರಮಕೈಗೊಳ್ಳಲಾಗುವುದೆಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ತಿಳಿಸಿದರು.
ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಮಧು ಜಿ.ಮಾದೇಗೌಡ ಅವರು ನಿಯಮ 72ರಡಿ ವಿಷಯ ಪ್ರಸ್ತಾಪಿಸಿ, ಕಳೆದ ಎರಡು ವರ್ಷಗಳಿಂದ ಕೆ-ಸೆಟ್ ಪರೀಕ್ಷೆ ನಡೆಸದಿರುವುದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗಿದ್ದು, ಈ ಬಗ್ಗೆ ಸರ್ಕಾರ ತ್ವರಿತವಾಗಿ ಕ್ರಮವಹಿಸಬೇಕು ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, 2022ನೇ ಸಾಲನ್ನೂ ಒಳಗೊಂಡಂತೆ ಅರ್ಹತೆ ಹೊಂದಿರುವ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕೆ-ಸೆಟ್ ಪರೀಕ್ಷೆಯನ್ನು ಕೆಇಎ ಮೂಲಕ ನಡೆಸಲು ಸರ್ಕಾರದ ಹಂತದಲ್ಲಿ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಯುಜಿಸಿಯ ಸಾಮಾನ್ಯ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಪರೀಕ್ಷೆಯನ್ನು ನಡೆಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.ಉತ್ತರಾಖಂಡದಲ್ಲಿ ಭಾರೀ ಮಳೆ ಹಿನ್ನೆಲೆ ಕೇದಾರನಾಥ ಯಾತ್ರೆ ಸ್ಥಗಿತ
ಅಲ್ಲದೆ, ಕೆ-ಸೆಟ್ ಪರೀಕ್ಷೆಯ 2022 ಮತ್ತು 2023ನೇ ಸಾಲಿನ ಕರಡು ವೇಳಾಪಟ್ಟಿಯೊಂದಿಗೆ ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಈಗಾಗಲೇ ಎರಡು ಬಾರಿ ಪತ್ರ ಬರೆಯಲಾಗಿದೆ ಎಂದು ಹೇಳಿದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ