ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಂಟೈನರ್ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಿಂಧಗಿ ಸಿಪಿಐ ಹಾಗೂ ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್‍ನಲ್ಲಿ ಬುಧವಾರ ಜರುಗಿದೆ.
ಸಿಂದಗಿ ಸಿಪಿಐ ರವಿ ಉಕ್ಕುಂದ (43) ಹಾಗೂ ಪತ್ನಿ ಮಧು (40) ಮೃತಪಟ್ಟವರು. ದಂಪತಿ ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಟ್ರಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಲಾರಿಯೊಳಗೆ ನುಗ್ಗಿದೆ. ರೆಪೊ ದರ ಶೇ.6.25ಕ್ಕೆ ಏರಿಕೆ ಮಾಡಿದ ಆರ್ ಬಿ ಐ
ಗಂಭೀರ ಗಾಯಗೊಂಡಿದ್ದ ರವಿ ಉಕ್ಕುಂದ ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ನೆಲೋಗಿ ಪೊಲೀಸರು ಭೇಟಿ ನೀಡಿದ್ದಾರೆ. ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ