ಕಾಳಿ ಸ್ವಾಮಿ ಮುಖಕ್ಕೆ ಮಸಿ ಬಳಿದ ಗುಂಪು – ಬೆಂಗಳೂರಿನಲ್ಲಿ ಕೃತ್ಯ

Team Newsnap
1 Min Read

ಬೆಂಗಳೂರಿನ ಮಲ್ಲೇಶ್ವರಂ ದೇವಾಲಯದಲ್ಲಿ ಪೂಜೆ ಮುಗಿಸಿ ಹೊರಬರುತ್ತಿದ್ದ ಕಾಳಿ ಸ್ವಾಮಿಗೆ ಗುಂಪೊಂದು ಏಕಾಏಕಿ ಮಸಿ ಬಳಿದಿರುವ ಘಟನೆ ಕಳೆದ ರಾತ್ರಿ ಜರುಗಿದೆ.

ಕಾಳಿಕಾ ಸೇನೆಯ ವತಿಯಿಂದ ಮಲ್ಲೇಶ್ವರಂನ ಗಂಗಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಪೂಜೆ ಮುಗಿಸಿ ಕಾಳಿ ಸ್ವಾಮಿ ಹೊರಬರುತ್ತಿದ್ದರು. ಈ ವೇಳೆ ಅವರಿಗೆ ಎದುರಾದ ಗುಂಪೊಂದು ಏಕಾಏಕಿ ಮಸಿ ಬಳಿದಿದೆ.

ಇದನ್ನು ಓದಿ :ರಾಜ್ಯದ ಜಿಪಂ – ತಾಪಂ ಚುನಾವಣೆಯ ಅರ್ಜಿ ಮೇ 17 ರಂದು ವಿಚಾರಣೆ : ಹೈಕೋರ್ಟ್

ಕಾಳಿ ಸ್ವಾಮಿ ಹೇಳಿದ್ದೇನು?

ಗಂಗಮ್ಮ ದೇವಾಲಯದಲ್ಲಿ ಪೂಜೆ ಇತ್ತು. ಪೂಜೆ ಬಹಳ ಚೆನ್ನಾಗಿ ಆಯ್ತು, ನನಗೆ ಬಹಳ ಖುಷಿಯೂ ಆಯ್ತು. ಪೂಜೆ ಮುಗಿಸಿ ಹೊರ ಬರುವ ವೇಳೆ ಕೆಲವರು ಬಂದು, `ನೀವು ಕುವೆಂಪು ಅವರನ್ನು ಮತ್ತು ಕನ್ನಡಪಡೆಗಳನ್ನು ನಿಂದಿಸಿದ್ದೀರಾ’ ಎಂದು ನನ್ನ ಬಳಿ ಜಗಳ ತೆಗೆದರು. ನಂತರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ ಎಂದಿದ್ದಾರೆ.

ಕುವೆಂಪು ಅವರು ಮತ್ತು ಕನ್ನಡಪಡೆಗಳನ್ನು ನಾನು ಯಾವತ್ತಿಗೂ ನಿಂದಿಸಿಲ್ಲ. ನಿಮ್ಮ ಬಳಿ ದಾಖಲೆಗಳಿದ್ದರೆ ಅದನ್ನು ತೋರಿಸಬೇಕು. ಅದನ್ನು ಬಿಟ್ಟು ಏಕಾಏಕಿ ಕಪ್ಪು ಮಸಿ ಬಳಿದರೆ? ನಾನು ನನ್ನನ್ನು ಕನ್ನಡಿಯಲ್ಲಿ ನೋಡಿಕೊಂಡಾಗ ಬಹಳ ಖುಷಿ ಆಯ್ತು. ನೀವು ಮಸಿ ಬಳಿಯುವ ಮೂಲಕ ಕಾಳಿಯ ರುದ್ರಾವತಾರ ತೋರಿಸಿದ್ದೀರಿ. ಕಾಳಿ ಇರೋದೆ ಕಪ್ಪು, ಅದನ್ನು ನೀವು ನನಗೆ ಹಾಕಿದ್ದೀರಾ ಅಷ್ಟೇ ಎಂದು ಕೃತ್ಯ ನಡಸಿದವರ ಬಗ್ಗೆ ಕಾಳಿ ಸ್ವಾಮಿ ವ್ಯಂಗ್ಯವಾಡಿದ್ದಾರೆ.

Share This Article
Leave a comment