ದಾಸ ಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಇಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲಕೃಷ್ಣ ಚಾಲನೆ ನೀಡಿದರು.
ಕನಕದಾಸರು ತಮ್ಮ ಸಾಹಿತ್ಯದ ಮೂಲಕ ಜೀವನದ ಮೌಲ್ಯಗಳ ಬಗ್ಗೆ ತಿಳಿಸಿದ್ದಾರೆ. ದಾಸ ಕೀರ್ತನೆಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದ್ದಾರೆ ಎಂದರು. ದಾಖಲೆ ಬರೆದ ವಿಶ್ವದ ಎತ್ತರದ ಕೆಂಪೇಗೌಡ ಪ್ರತಿಮೆ : ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆ
ಇದೇ ಸಂದರ್ಭದಲ್ಲಿ ಮಾಜಿ ಸಚಿವ ಆತ್ಮಾನಂದ, ಜಿಲ್ಲಾ ಕುರುಬರ ಸಂಃದ ಅಧ್ಯಕ್ಷ ಸುರೇಶ್, ಜಂಟಿ ಕೃಷಿ ನಿರ್ದೇಶಕ ಅಶೋಕ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜವರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯ್ ಕುಮಾರ್, ಮುಖಂಡುರುಗಳಾದ ಮಹೇಶ್, ರಾಮಕೃಷ್ಣ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.