Bengaluru

ಕನ್ನಡದ ನಿರೂಪಕಿ ಅಪರ್ಣಾ ಇನ್ನಿಲ್ಲ

  • ಕನ್ನಡ ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದರು
  • ಸಿನಿಮಾ, ಕಿರುತೆರೆ, ರಿಯಾಲಿಟಿ ಶೋಗಳಲ್ಲಿ ಅಭಿನಯಿಸಿದ್ದ ಅಪರ್ಣಾ

ಬೆಂಗಳೂರು :ಕನ್ನಡ ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದ ನಿರೂಪಕಿ ಅಪರ್ಣಾ ಅವರು ಇನ್ನಿಲ್ಲ.

ಕನ್ನಡ ಚಿತ್ರರಂಗದಲ್ಲಿ ಬಹಳ ಸಕ್ರಿಯವಾಗಿರೋ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ಇನ್ನಿಲ್ಲ .

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನದ ಸುದ್ದಿ ಆಘಾತ ತಂದಿದೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅಪರ್ಣಾ ಅವರಿಗೆ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ.

ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದಲ್ಲಿರುವ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ಅಪರ್ಣಾ ನಡೆದು ಬಂದ ದಾರಿ:

ಅಪರ್ಣಾ 1989 ರಲ್ಲಿ ನಿರೂಪಕಿಯಾಗಿ ಟೆಲಿವಿಷನ್ ಸೇರಿದ್ರು. ಇವರು 1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್​ ಅವರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದವರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದರು.

90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು ಅಪರ್ಣಾ. ನಂತರ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲೇ ದೀಪಾವಳಿ ಕಾರ್ಯಕ್ರಮದಲ್ಲಿ 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಮೂಡಲ ಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ರು. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದಾರೆ.

Team Newsnap
Leave a Comment

Recent Posts

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024