275 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭ

Team Newsnap
0 Min Read

ಬೆಂಗಳೂರು, ಸೆ.3: ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಎಲ್ಕೆಜಿ, ಯುಕೆಜಿ ಆಲಂಭಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೊದಲ ಹಂತವಾಗಿ 275 ಪಬ್ಲಿಕ್ ಶಾಲೆಗಳಲ್ಲಿ ಪ್ರಾರಂಭಿಸಲಾಗುವುದು. ಈ ಶಾಲೆಗಳಲ್ಲಿ ಅಗತ್ಯ ಸೌಲಭ್ಯಗಳು ಕಲ್ಪಿಸುವ ಜತೆಗೆ, ಡಿಎಡ್ ಆದವರಿಗೆ ಮಾಂಟೆಸ್ಸರಿ ತರಬೇತಿ ನೀಡಲಾಗುವುದು. ಶಿಕ್ಷಕರಿಗೆ 7,500 ಹಾಗೂ ಆಯಾಗಳಿಗೆ 5,000 ರೂ. ಗೌರವ ಧನ ನೀಡಲಾಗುವುದು ಎಂದು ಸಚಿವ ಮಾಧುಸ್ವಾಮಿ ಹೇಳಿದರು. 

Share This Article
1 Comment