ರಾಜ್ಯದಲ್ಲಿ ‘ಕನ್ನಡ ನಾಮಫಲಕ ‘ ಕಾನೂನು ರಾಜ್ಯಪಾಲರ ಒಪ್ಪಿಗೆಯೊಂದಿಗೆ ಜಾರಿ

Team Newsnap
1 Min Read

ಬೆಂಗಳೂರು: ರಾಜ್ಯಪಾಲರ ಒಪ್ಪಿಗೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಸಿಕ್ಕಿದೆ. ರಾಜ್ಯ ಪತ್ರ ಪ್ರಕಟವಾಗಿದ್ದು, ಈ ಮೂಲಕ ನಾಮಫಲಕದಲ್ಲಿ ಶೇಕಡ 60ರಷ್ಟು ಕನ್ನಡಕ್ಕೆ ಪ್ರಾಶಸ್ತ್ಯ ಒಳಗೊಂಡ ಕಾನೂನು ಜಾರಿ ಮಾಡಲಾಗಿದೆ.

ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆ, ವಾಣಿಜ್ಯ, ವ್ಯವಹಾರ, ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಪ್ರಯೋಗಾಲಯ, ಆಸ್ಪತ್ರೆ, ಮನರಂಜನಾ ಕೇಂದ್ರ, ಹೋಟೆಲ್ ಮೊದಲಾದವುಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇಕಡ 60ರಷ್ಟು ಕಡ್ಡಾಯವಾಗಿ ಹಾಕಬೇಕು.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಮೇಲ್ಭಾಗದಲ್ಲಿ ಕನ್ನಡ ಭಾಷೆ ನಾಮಫಲಕ ಪ್ರದರ್ಶಿಸಬೇಕು ಎಂದು ತಿಳಿಸಲಾಗಿದೆ.

Share This Article
Leave a comment