ಕನ್ನಡ ನಿರ್ಲಕ್ಷ್ಯ : ಮೆಟ್ರೋ ಎಂ ಡಿ ಗೆ ನೋಟಿಸ್

Team Newsnap
1 Min Read

ಇತ್ತೀಚೆಗೆ ನಡೆದ ಬೆಂಗಳೂರಿನ ನಾಯಂಡಹಳ್ಳಿ-ಕೆಂಗೇರಿ ನಡುವೆ ಆರಂಭಗೊಂಡ ಮೆಟ್ರೋ ರೈಲು ಸಂಚಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಕಡೆಗಣಿಸಿರುವುದಕ್ಕೆ “ನಮ್ಮಮಟ್ರೋ’ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ನೀಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಈ ವಿಷಯ ತಿಳಿಸಿದ್ದಾರೆ. ಕನ್ನಡವನ್ನು ಅಧಿಕೃತ ಭಾಷೆ ಎಂದು ರಾಜ್ಯ ಸರ್ಕಾರ ಘೋಷಿಸಿದ್ದರೂ ಕನ್ನಡದ ನಿರ್ಲಕ್ಷ್ಯ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಬಳಸದಿರುವುದು ಅಪರಾಧ. ಈ ಬಗ್ಗೆ ತಕ್ಷಣ ಸ್ಪಷ್ಟೀಕರಣ ಕೊಡಬೇಕು ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಬಳಸಬೇಕೆಂಬ ನಿಯಮವನ್ನು ಆಯೋಜಕರು ಕಡ್ಡಾಯವಾಗಿ ಪಾಲಿಸಬೇಕೆಂದು ಅವರು ಸೂಚನೆ ನೀಡಿದ್ದಾರೆ.

Share This Article
Leave a comment