ಕೊರೋನಾ ಮಹಾಮಾರಿ ನಡುವೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಬಂದಿದೆ. ಸರ್ಕಾರದ ವಿವಿಧ ಇಲಾಖೆಗಳು, ವಿವಿಧ ಸಂಘ-ಸಂಸ್ಥೆಗಳು ಕರ್ನಾಟಕ ರಾಜ್ಯೋತ್ಸವ ಆಚರಿಸಲು ರಾಜ್ಯ ಸರ್ಕಾರವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಮಾರ್ಗಸೂಚಿಯಲ್ಲಿನ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸ ಬೇಕಾಗಿದೆ.
ಶುಕ್ರವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಮಾರ್ಗಸೂಚಿಗಳ ಪಟ್ಟಿ ಬಿಡುಗಡೆ ಮಾಡಿ ಎಲ್ಲರೂ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಸೂಚಿಸಿದ್ದಾರೆ.
ಮಾರ್ಗಸೂಚಿಯಲ್ಲಿನ ನಿಯಮಗಳೇನು?
- ರಾಜ್ಯೋತ್ಸವವನ್ನು ಆದಷ್ಟು ಪ್ರಮಾಣದಲ್ಲಿ ಸರಳವಾಗಿ ಹಾಗೂ ಗೌರವಯುತವಾಗಿ ಆಚರಣೆ ಮಾಡಬೇಕು.
- ಧ್ವಜಾರೋಹಣ ಸಮಯದಲ್ಲಿ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ, ಸ್ಯಾನಿಟೈಜರ್ ಬಳಕೆ ಕಡ್ಡಾಯವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗುವುದು.
- ಧ್ವಜಾರೋಹಣ ಕಾರ್ಯಕ್ರಮದಲ್ಲಿ ಕೇವಲ 100 ಜನ ಸೇರಲು ಅವಕಾಶ.
- ರಾಜ್ಯೋತ್ಸವ ಆಚರಿಸುವ ಬೇರೆ ಸಂಘ ಸಂಸ್ಥೆಗಳು, ಸರ್ಕಾರದ ವಿವಿಧ ಇಲಾಖೆಗಳಿಂದ ಪೂರ್ವಾನುಮತಿ ಪಡೆದಿರಬೇಕು. ಉದಾ: ಪೋಲೀಸ್ ಇಲಾಖೆ ಮಹಾನಗರ ಪಾಲಿಕೆ ಅಥವಾ ಪುರಸಭೆ, ವಿದ್ಯುತ್ ಇಲಾಖೆ, ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ ಇತ್ಯಾದಿ.
- ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ ಕಾರ್ಯಕ್ರಮ ನಡೆಸಬೇಕು.
- ಕೊರೋನಾ ಸೋಂಕು ನಿಯಂತ್ರಣ ಕ್ರಮ ಕಡ್ಡಾಯ.
- ಆರೋಗ್ಯದ ಹಿತದೃಷ್ಠಿಯಿಂದ ಸಣ್ಣ ಮಕ್ಕಳು, ವೃದ್ಧರು, ರೋಗಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ನಿಷೇಧ ಮಾಡಲಾಗಿದೆ.
- ಅತೀ ಕಡಿಮೆ ಪ್ರಮಾಣದಲ್ಲಿ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
More Stories
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ