ಈ ಬಾರಿ ಆಡಳಿತ ರೂಢ ಜೆಡಿಯು ಪಕ್ಷವು ಬಿಹಾರದಿಂದ ರಾಜ್ಯಸಭೆಗೆ ಕನ್ನಡಿಗ ಹಾಗೂ ಉಡುಪಿ ಮೂಲದ ಅನಿಲ್ ಹೆಗ್ಡೆ ಅವರಿಗೆ ಸ್ಪರ್ಧೆ ಮಾಡಲು ಟಿಕೆಟ್ ನೀಡಿದೆ. ಮೇ 30 ರಂದು ಉಪಚುನಾವಣೆ ನಡೆಯಲಿದೆ.
ಮಂಗಳೂರಿನವರಾಗಿರುವ ಅನಿಲ್ ಹೆಗ್ಡೆ ಸುದೀರ್ಘ ಅವಧಿವರೆಗೆ ಜಾರ್ಜ್ ಫರ್ನಾಂಡಿಸ್ ಅವರ ಕಾರ್ಯದರ್ಶಿಯಾಗಿದ್ದರು. ಮಹೇಂದ್ರ ಪ್ರಸಾದ್ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ .ಇದೀಗ ಜೆಡಿಯು ಅನಿಲ್ ಹೆಗ್ಡೆ ಅವರನ್ನು ಕಣಕ್ಕಿಳಿಸಿರುವುದಾಗಿ ಪಕ್ಷ ತಿಳಿಸಿದೆ.
ಇದನ್ನು ಓದಿ : ವಿಧಾನ ಪರಿಷತ್ ಅಧ್ಯಕ್ಷ , MLC ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ
ಈ ಆಯ್ಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಯು ನಾಯಕರೊಬ್ಬರು, ರಾಜ್ಯಸಭಾ ಉಪಚುನಾವಣೆಗೆ ಅನಿಲ್ ಹೆಗ್ಡೆಯವರ ನಾಮಪತ್ರ ಘೋಷಣೆ ಆಶ್ಚರ್ಯ ತಂದಿದೆ. ಇದು ಸಂಘಟನೆ ಮತ್ತು ಪಕ್ಷಕ್ಕಾಗಿ ಮೌನವಾಗಿ ದುಡಿಯುತ್ತಿರುವ ವ್ಯಕ್ತಿಗೆ ಸಿಕ್ಕ ಪ್ರತಿಫಲವಾಗಿದೆ. ಅವರ ಕೊಡುಗೆಯನ್ನು ಜೆಡಿಯು ಗುರುತಿಸಿದೆ. ಅವರು ಬಿಹಾರದಿಂದ ನಾಮನಿರ್ದೇಶಿತರಾಗುತ್ತಾರೆ ಎಂದು ಹೇಳಿದ್ದಾರೆ.
ಬಿಜೆಪಿಯ ಮಿತ್ರ ಪಕ್ಷವಾದ ಜೆಡಿ(ಯು) ಉಪಚುನಾವಣೆಯಲ್ಲಿ ಸ್ಥಾನವನ್ನು ಪಡೆಯಲು ಸಿದ್ಧವಾಗಿದೆ. ಅದಕ್ಕಾಗಿಯೇ ಅನಿಲ್ ಹೆಗ್ಡೆ ಅವರಿಗೆ ಸ್ಥಾನ ನೀಡಿದೆ ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು