December 22, 2024

Newsnap Kannada

The World at your finger tips!

politics,canada,kannada

MP Chandra Arya spoke in Kannada in the Canadian Parliament

ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ

Spread the love

ಇದನ್ನು ಓದಿ :ಜೂ. 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿ ಸಿ ನಾಗೇಶ

ಕೆನಡಾ ದೇಶದ ಸಂಸತ್ತಿನಲ್ಲಿ ನಮ್ಮ ಮಾತೃಭಾಷೆ ಕನ್ನಡ ಭಾಷೆಯಲ್ಲೇ ಮಾತನಾಡುವ ಮೂಲಕ ಚಂದ್ರ ಆರ್ಯ ಕನ್ನಡ ನಾಡು, ಕನ್ನಡ ಭಾಷೆ, ಕನ್ನಡಿಗರ ಮೇಲಿನ ತಮ್ಮ ಪ್ರೀತಿ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

ಚಂದ್ರ ಆರ್ಯ ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದವರು. ಇವರು ಕೆನಡಾ ದೇಶದ ಸಂಸದರಾಗಿ ಆಯ್ಕೆಯಾಗಿ ಅತ್ಯುತ್ತಮ ಕೆಲಸ ನಿವರ್ಹಿಸುತ್ತಿದ್ದಾರೆ. ಚಂದ್ರ ಆರ್ಯ ಅವರು ಕೆನಡಾದಲ್ಲಿ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕೆನಡಾ ದೇಶದ ಸಂಸತ್ತಿನಲ್ಲಿ ಮಾತನಾಡುವಾಗ ತಮ್ಮ ಮಾತೃಭಾಷೆ ಕನ್ನಡದಲ್ಲೇ ಮಾತನಾಡುವ ಮೂಲಕ ಚಂದ್ರ ಆರ್ಯ ಅವರು ಎಲ್ಲರ ಗಮನ ಸೆಳೆದಿದ್ದಾರೆ.

ಈ ಬಗ್ಗೆ ಸ್ವತಃ ಚಂದ್ರ ಆರ್ಯ ಅವರು ಟ್ವೀಟ್ ಮಾಡಿದ್ದಾರೆ ನಾನು ಕೆನಡಾ ಸಂಸತ್ತಿನಲ್ಲಿ ನನ್ನ ಮಾತೃಭಾಷೆಯಲ್ಲಿ ಮಾತನಾಡಿದ್ದೇನೆ. ಪುರಾತನ ಇತಿಹಾಸವುಳ್ಳ ಸುಂದರವಾದ ನಮ್ಮ ಕನ್ನಡ ಭಾಷೆಯನ್ನ, 5 ಕೋಟಿ ಜನ ಮಾತನಾಡುತ್ತಾರೆ. ಪ್ರಪಂಚದಲ್ಲಿ ಇದೇ ಮೊದಲ ಬಾರಿಗೆ ವಿದೇಶದ ಸಂಸತ್ತಿನಲ್ಲಿ ಕನ್ನಡ ಭಾಷೆಯ ಮೂಲಕ ಮಾತನಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!