ಕಾಂಗ್ರೆಸ್ ವಿರೋಧಿಸಲು ಬಿಜೆಪಿ ನಾಯಕರು ನನಗೆ ಸುಪಾರಿ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ನನಗೆ ಸುಪಾರಿ ಕೊಟ್ಟಿರೋದು ಬಿಜೆಪಿಯವರಲ್ಲ, ಕನ್ನಡಿಗರು. ಎರಡು ರಾಷ್ಟ್ರೀಯ ಪಕ್ಷಗಳನ್ನು ಹೊರ ಹಾಕಲು ಕನ್ನಡಿಗರು ಸುಪಾರಿ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮಾರ್ಮಿಕವಾಗಿ ತಿವಿದರು.
ಬೆಂಗಳೂರಿನಲ್ಲಿ ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಪಕ್ಷವು ಫ್ರೀಡಂ ಪಾರ್ಕ್‍ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಬಿಜೆಪಿ ನಾಯಕರು ಎಷ್ಟು ಕಾರಣವೋ, ಕಾಂಗ್ರೆಸ್ ನಾಯಕರು ಅಷ್ಟೇ ಕಾರಣ. ಅಪಮಾರ್ಗದ ಮೂಲಕ ನನ್ನ ನೇತೃತ್ವದ ಮೈತ್ರಿ ಸರ್ಕಾರವನ್ನು ತೆಗೆದರು. ಅದೇ ರೀತಿಯ ಅಪಮಾರ್ಗದ ಮೂಲಕ ಬಿಜೆಪಿ ಸರ್ಕಾರ ಬಂತು. ಆದರೆ ಇವತ್ತು ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ನಾಯಕರು ಅನೈತಿಕ ಸರ್ಕಾರ ಎಂದು ಹೇಳುತ್ತಿದ್ದಾರೆ. ಇದನ್ನು ರಾಜ್ಯದ ಜನರು ಗಮನಿಸಬೇಕು ಎಂದು ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.
ಬೆಂಗಳೂರಿಗೆ ಸರಿಯಾದ ಸೌಕರ್ಯ ನೀಡಿ ಎಂದು ಉದ್ಯಮಿ ಟಿ.ಎ ಮೋಹನ್ ದಾಸ್ ಪೈ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ರಾಜ್ಯದ ಸ್ಥಿತಿಯನ್ನು ಬಿಜೆಪಿ ಎಲ್ಲಿಗೆ ತಂದಿದೆ? ಯಾವುದೇ ಕೆಲಸ ಆಗಬೇಕಾದರೆ ಸರ್ಕಾರಕ್ಕೆ ನ್ಯಾಯಾಲಯವೇ ಆದೇಶ ಕೊಡಬೇಕು ಅಥವಾ ಮೋದಿ ಅವರೇ ಹೇಳಬೇಕಾ? ಎಂದು ರಾಜ್ಯ ಸರ್ಕಾರದ ಕಾರ್ಯವೈಖರಿ ಕುರಿತು ವ್ಯಂಗ್ಯವಾಡಿದ್ದಾರೆ.
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
- 100 ಕೋಟಿ ವಂಚನೆ ಪ್ರಕರಣ: ದೆಹಲಿಯಲ್ಲಿ ಚೀನಾ ಪ್ರಜೆ ಬಂಧನ
- ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
- ಶಬರಿಮಲೈ ಭಕ್ತರಿದ್ದ ಬಸ್ ಪಲ್ಟಿ: ರಾಜ್ಯದ 27 ಮಂದಿ ಗಾಯ
- ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ
More Stories
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ