2023ರ ಆಸ್ಕರ್ ಪ್ರಶಸ್ತಿಗೆ ಕಾಂತಾರ ಸಿನಿಮಾವನ್ನು ನಾಮನಿರ್ದೇಶನ ಮಾಡುವಂತೆ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಸಿನಿಮಾವನ್ನು ಕಳುಹಿಸಲಾಗಿದೆ ಎಂದು ಹೊಂಬಾಳೆ ಫಿಲ್ಮ್ಸ್( Hombale Films ) ಖಚಿತಪಡಿಸಿದೆ.ಖ್ಯಾತ ಗಮಕ ಕಲಾವಿದ ಪದ್ಮಶ್ರೀ ಪುರಸ್ಕೃತ ಹೊಸಹಳ್ಳಿ ಕೇಶವಮೂರ್ತಿ ಇನ್ನಿಲ್ಲ
ಹೊಂಬಾಳೆ ಪ್ರೊಡಕ್ಷನ್ಸ್ ( Hombale Production ) ಸಂಸ್ಥಾಪಕ ವಿಜಯ್ ಕಿರಗಂದೂರ್ ಮಾತನಾಡಿ, ಕೊನೆಯ ಕ್ಷಣದಲ್ಲಿ ಅರ್ಜಿ ಕಳುಹಿಸಿದ್ದು, ನಾಮನಿರ್ದೇಶನಕ್ಕೆ ಪರಿಗಣಿಸುವ ಬಗ್ಗೆ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.
ಕಾಂತಾರ ಕಥೆಯು ಎಷ್ಟು ಬೇರೂರಿದೆ ಎಂದರೆ ಅದು ವಿಶ್ವದಾದ್ಯಂತ ಮಾರ್ಧನಿಸಿದೆ ಎಂದು ವಿಜಯ್ ಕಿರಗಂದೂರು ಹೇಳಿದ್ದಾರೆ.
ಕನ್ನಡದ `ಕಾಂತಾರ’ ಈಗಾಗಲೇ ತೆಲುಗು, ತಮಿಳು, ಮಲಯಾಳಂ, ಹಿಂದಿ, ತುಳು ಭಾಷೆಯಲ್ಲಿ ಡಬ್ ಆಗಿ ರಿಲೀಸ್ ಆಗಿದ್ದು, ಎಲ್ಲಾ ಭಾಷೆಯ ಪ್ರೇಕ್ಷಕರನ್ನ ಸೆಳೆಯುತ್ತಿದೆ.
ಕೆಜಿಎಫ್ 2 ಬಳಿಕ 2022ರಲ್ಲಿ ಮೆಗಾ ಹಿಟ್ ಸಿನಿಮಾ ಆಗಿ ಹೊರಹೊಮ್ಮಿದ ಕಾಂತಾರ ವಿಶ್ವದಾದ್ಯಂತ 400 ಕೋಟಿಗಿಂತಲೂ ಅಧಿಕ ಹಣ ಬಾಚಿಕೊಂಡಿದೆ. ಇದೀಗ ಆಸ್ಕರ್‌ನತ್ತ ಮುಖ ಮಾಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್