ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ಪ್ರಕಟಿಸಿದರು.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ನಾರಾಯಣಗೌಡ, ಏಕಲವ್ಯ ಪ್ರಶಸ್ತಿಗೆ 15, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ 14, ಕರ್ನಾಟಕ ಕ್ರೀಡಾಪೋಷಕ ಪ್ರಶಸ್ತಿಗೆ 10 ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ.
2020-21 ನೇ ಸಾಲಿನಲ್ಲಿ ಏಕಲವ್ಯ ಪ್ರಶಸ್ತಿಗೆ 151, ಕರ್ನಾಟಕ ಕ್ರೀಡಾರತ್ನ 53, ಕ್ರೀಡಾ ಪೋಷಕ 25 ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗೆ 28 ಅರ್ಜಿಗಳು ಸ್ವೀಕೃತವಾಗಿದ್ದವು.
ಇದರಲ್ಲಿ ಪ್ರಶಸ್ತಿ ಆಯ್ಕೆಗೆ ನೇಮಿಸಲಾಗಿದ್ದ ತಜ್ಞರ ಸಮಿತಿ ಪರಿಶೀಲನೆ ನಡೆಸಿ ಅರ್ಹರನ್ನು ಆಯ್ಕೆ ಮಾಡಿದೆ.
ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ದಿನಾಂಕವನ್ನು ನಿಗದಿ ಮಾಡಿ ಶೀಘ್ರದಲ್ಲೇ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಚಿವ ನಾರಾಯಣಗೌಡ ಹೇಳಿದರು.
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಏಕಾದಶಿ ಉಪವಾಸದ ಬಗ್ಗೆ ವೈಜ್ಞಾನಿಕ ಚಿಂತನೆ ಏನು ಹೇಳುತ್ತದೆ?
- ಮೋಕ್ಷವನ್ನು ನೀಡುವ “ಮೋಕ್ಷದಾ ಏಕಾದಶಿ (ವೈಕುಂಠ ಏಕಾದಶಿ )”
More Stories
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್