ಮರಾಠ ಅಭಿವೃದ್ದಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡ ಪರ ಒಕ್ಕೂಟಗಳು ಡಿಸೆಂಬರ್ 5 ರಂದು ನೀಡಿರುವ ಬಂದ್ ಕರೆ ಅಧಿಕೃತಗೊಂಡಿದೆ.
ಇಂದು ಒಕ್ಕೂಟದ ಪ್ರಮುಖರು ಬೆಂಗಳೂರಿನಲ್ಲಿ ಸಭೆ ನಡೆಸಿ ಬಂದ್ ನಡೆಸುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.
ಕರ್ನಾಟಕ ಬಂದ್‌ಗೆ ಹಲವು ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಇನ್ನು ಹೋಟೆಲ್ ಮಾಲೀಕರ ಸಂಘ, ಟ್ಯಾಕ್ಸಿ ಮಾಲೀಕರ ಸಂಘಟನೆಗಳೂ ಕೂಡಾ ನೈತಿಕ ಬೆಂಬಲ ಸೂಚಿಸಿವೆ.
ವಾಹನ ಸಂಚಾರ ಇರುವುದಿಲ್ಲ:
ಬಂದ್ ಹಿನ್ನೆಲೆಯಲ್ಲಿ ಡಿ 5 _ರಂದು ಬೆಂಗಳೂರು ನಗರದಲ್ಲಿ ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಕನ್ನಡ ಪರ ಸಂಘಟನೆಗಳ ಒಕ್ಕೂಟ ತಿಳಿಸಿವೆ.
ಅಲ್ಲದೆ ಮರಾಠಿ ಅಭಿವೃದ್ದಿ ಪ್ರಾಧಿಕಾರ ವಿರೋಧಿಸಿ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್ ವರೆಗೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.
ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ನಡೆಯಲಿರುವ ಬಂದ್‌ಗೆ ಎಲ್ಲರೂ ಬೆಂಬಲ ನೀಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿ ದ್ದಾರೆ. ಆದರೆ ಕನ್ನಡ ರಕ್ಷಣಾ ವೇದಿಕೆ ಇನ್ನೂ ತಮ್ಮ ಸಂಘಟನೆಯ ನಿಲುವನ್ನು ಅಧಿಕೃತಗೊಳಿಸಿಲ್ಲ.
ಮರಾಠಿಗರ ಅಭಿವೃದ್ಧಿ ಯಾಕೆ?
ಮರಾಠಿಗರ ಅಭಿವೃದ್ದಿ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮರಾಠಿ ಅಭಿವೃದ್ದಿ ನಿಗಮವನ್ನು ಸ್ಥಾಪನೆ ಮಾಡಿದೆ. ಆದರೆ ಇದಕ್ಕೆ ಕನ್ನಡ ಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮರಾಠಿ ಅಭಿವೃದ್ದಿ ನಿಗಮವನ್ನು ವಾಪಸ್ ಪಡೆದುಕೊಳ್ಳಲು ಆಗ್ರಹಿಸಿವೆ. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಲಾಗಿದೆ.
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಏಕಾದಶಿ ಉಪವಾಸದ ಬಗ್ಗೆ ವೈಜ್ಞಾನಿಕ ಚಿಂತನೆ ಏನು ಹೇಳುತ್ತದೆ?
More Stories
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ