ಆದರೆ, ಈ ಬಂದ್ ದಿನಾಂಕಕ್ಕೆ ಹಲವರ ಆಕ್ಷೇಪ ವ್ಯಕ್ತವಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಂದ್ ಮುಂದೂಡಬೇಕು ಎಂಬ ಒತ್ತಾಯ ಹೆಚ್ಚಾಗಿದೆ.
ಮಾರ್ಚ್ 21ರಿಂದ SSLC (10ನೇ ತರಗತಿ) ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಏಪ್ರಿಲ್ 4ರವರೆಗೆ ನಡೆಯಲಿದೆ. ಇದಾದಂತೆ ಬಂದ್ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಹುದು ಎಂಬ ಕಾರಣವನ್ನು ಪೋಷಕರು ಹಾಗೂ ಕನ್ನಡ ಪರ ಸಂಘಟನೆಗಳು ಮುಂದಿಟ್ಟು ಬಂದ್ ದಿನಾಂಕ ಬದಲಾಯಿಸಲು ಒತ್ತಾಯಿಸುತ್ತಿವೆ.
ಈಗಾಗಲೇ ಪಿಯು ಪರೀಕ್ಷೆಗಳು ಮಾರ್ಚ್ 20ರಂದು ಮುಕ್ತಾಯಗೊಳ್ಳಲಿವೆ, ಹೀಗಾಗಿ ಮಾರ್ಚ್ 22ರಂದು ಕರ್ನಾಟಕ ಬಂದ್ ಮಾಡಿದರೆ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹೋಗಲು ತೊಂದರೆಯಾಗಬಹುದು. ಪೋಷಕರು “ಒಂದು ದಿನದ ಬಂದ್‌ಗಾಗಿ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ” ಎಂದು ಕನ್ನಡ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ.
ಈ ಎಲ್ಲ ಕಾರಣಗಳಿಂದಾಗಿ ಕರ್ನಾಟಕ ಬಂದ್ ದಿನಾಂಕವನ್ನು ಪರಿಗಣಿಸಿ ಬದಲಾಯಿಸಲು ಕನ್ನಡಪರ ಸಂಘಟನೆಗಳ ಆಲೋಚನೆ ನಡೆಯುತ್ತಿದೆ. ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಇನ್ನೊಂದು ಸುತ್ತಿನ ಸಭೆ ನಡೆಯುವ ಸಾಧ್ಯತೆ ಇದೆ. ಈ ಸಭೆಯಲ್ಲಿ ಬಂದ್ ದಿನಾಂಕ ಬದಲಾವಣೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.ಇದನ್ನು ಓದಿ –ITI ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ 240 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ!
ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಬಂದ್ ಮುಂದೂಡಲು ಒತ್ತಾಯಿಸುತ್ತಿರುವ ಪೋಷಕರು, ಕನ್ನಡಪರ ಸಂಘಟನೆಗಳು ಮತ್ತು ಸಾರ್ವಜನಿಕರು ಈ ನಿರ್ಧಾರದತ್ತ ಕಣ್ಮರೆಯಿಟ್ಟಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು