ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ರಂದು ಕರ್ನಾಟಕ ಬಂದ್

Team Newsnap
1 Min Read

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ.

ಕೂಡಲೇ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು.

ಒಂದು ವೇಳೆ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು.

ಇದನ್ನು ಓದಿ – ಮೈಸೂರಿನಲ್ಲಿ ಖೋ ಖೋ ಆಡುವಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಆದರೆ ರಾಜ್ಯ ಸರ್ಕಾರದ ಜತೆ ಚರ್ಚೆ ನಡೆಸಿ ಮನವರಿಕೆ ಮಾಡಿಕೊಡುವ ಪ್ರಯತ್ನ ವಿಫಲ ಹಿನ್ನಲೆಯಲ್ಲಿ ಅನಿವಾರ್ಯವಾಗಿ ಸರ್ಕಾರದ ಗಮನ ಸೆಳೆಯಲು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಬಂಧ್ ಗೆ ಕರೆ ನೀಡಿದೆ.

Share This Article
Leave a comment