ಕರ್ನಾಟಕ ಮುಖ್ಯಮಂತ್ರಿ ಆಯ್ಕೆ : ನಾಳೆ ಮಹತ್ವದ ಸಭೆ

Team Newsnap
1 Min Read
Finance Account to siddu : Irrigation , Bangalore Development Account to DK ಹಣಕಾಸು ಖಾತೆಗೆ ಸಿದ್ದು ಪಟ್ಟು: ಡಿಕೆಗೆ ನೀರಾವರಿ, ಬೆಂಗಳೂರು ಅಭಿವೃದ್ದಿ ಖಾತೆ

ಕಾಂಗ್ರೆಸ್ ಪಕ್ಷದಿಂದ ಮುಂದಿನ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆಯಿಂದ ನಡೆಯುತ್ತಿರುವ ಸಭೆಯಲ್ಲಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ನಾಳೆ ದೆಹಲಿಯಲ್ಲಿ ಬೆಳಿಗ್ಗೆ 11ಕ್ಕೆ ಸಿಎಂ ಆಯ್ಕೆ ಬಗ್ಗೆ ಕೊನೆಯ ಸುತ್ತಿನ ಸಭೆ ನಡೆಯಲಿದೆ.

ಡಿಕೆಶಿ ಹಾಗೂ ಸಿದ್ದು ಸಿಎಂ ಸ್ಥಾನ ಬಿಟ್ಟು ಬೇರೆ ಯಾವುದೇ ಹುದ್ದೆ ಬೇಡ ಎನ್ನುವ ಬಗ್ಗೆ ಹೈಕಮಾಂಡ್ ಗೆ ಹೇಳಿದ್ದಾರೆ . ತಮ್ಮ ಪಟ್ಟು ಸಡಿಲಸದ ಹಿನ್ನಲೆಯಲ್ಲಿ ಸಿಎಂ ಆಯ್ಕೆ ಕಸರತ್ತು ಕೊನೆಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ.

ದೆಹಲಿಯಲ್ಲಿ ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ನಡೆಸಲಾಯಿತು. ಮೊದಲು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕೆ.ಸಿ ವೇಣುಗೋಪಾಲ್, ಸುರ್ಜೇವಾಲಾ ಸೇರಿದಂತೆ ಎಐಸಿಸಿ ಅಧ್ಯಕ್ಷರು ಭಾಗಿಯಾಗಿ ಸಭೆಯಲ್ಲಿ ಚರ್ಚಿಸಿದರು. ಈ ಬಳಿಕ ಸಿಎಂ ರೇಸ್ ನಲ್ಲಿರುವಂತ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಅವರನ್ನು ಓನ್ ಟು ಒನ್ ಕರೆದು ಖರ್ಗೆ ಚರ್ಚಿಸಿದರು.

ಇಬ್ಬರು ನಾಯಕರು ಸಿಎಂ ಹುದ್ದೆಗಾಗಿ ಪಟ್ಟು ಹಿಡಿದ ಕಾರಣ ಇಂದು ಕೂಡ ಸಿಎಂ ಆಯ್ಕೆಯನ್ನು ಹೈಕಮಾಂಡ್ ಅಂತಿಮಗೊಳಿಸಲು ಸಾಧ್ಯವಾಗಿಲ್ಲ.

ನಾಳೆ ಬೆಳಿಗ್ಗೆ 11ಕ್ಕೆ ಕೊನೆಯ ಸಭೆ ನಡೆಯಲಿದೆ ಎನ್ನಲಾಗುತ್ತಿದೆ. ಈವರೆಗೆ ಸಿಎಲ್ ಪಿ ನಾಯಕನ ಹೆಸರು ಆಯ್ಕೆಗಾಗಿ ವೀಕ್ಷಕರ ವರದಿ, ಶಾಸಕರ ಅಭಿಪ್ರಾಯ, ಆಕಾಂಕ್ಷಿಗಳ ಅಭಿಪ್ರಾಯವನ್ನು ಸಂಗ್ರಹಿಸದಂತೆ ಸಭೆ ನಡೆಯಲಿದೆ. ಈ ಎಲ್ಲಾವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಿದ್ಧರಾಮಯ್ಯ ಭಾಗಿಯೊಂದಿಗೆ ಒಟ್ಟಾಗಿ ಚರ್ಚಿಸಿ, ಫೈನಲ್ ಮಾಡಲಿದ್ದಾರೆ.

ನಾಳೆ ಬೆಳಿಗ್ಗೆ 11ಕ್ಕೆ ನವದೆಹಲಿಯಲ್ಲಿ ನಡೆಯಲಿರುವಂತ ಸಭೆ ತೀವ್ರ ಕುತೂಹಲ ಮೂಡಿಸಿದ್ದು, ನಾಳೆಯೇ ಕರ್ನಾಟಕದ ಮುಂದಿನ ಸಿಎಂ ಯಾರು ಎನ್ನುವ ಹೆಸರು ಕೂಡ ಕಾಂಗ್ರೆಸ್ ಹೈಕಮಾಂಡ್ ಪ್ರಕಟಿಸುವ ಸಾಧ್ಯತೆ ಇದೆ. 

Share This Article
Leave a comment