ಬೆಂಗಳೂರು: ಕರ್ನಾಟಕ ವಿದ್ಯುತ್ ಕಾರ್ಖಾನೆಯ ಗುತ್ತಿಗೆ ನೌಕರ ಫ್ಲೈಓವರ್ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಯಂಡಹಳ್ಳಿ ನಡೆದಿದೆ .
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ನವೀನ್ ಕುಮಾರ್ ( 30 ) ತನ್ನ ಬೈಕನ್ನ ಫ್ಲೈಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ.
ಕರ್ನಾಟಕ ವಿದ್ಯುತ್ ಕಾರ್ಖಾನೆಯಲ್ಲಿ ಕಳೆದ 3-4 ತಿಂಗಳಿನಿಂದ ಮಾಡುತ್ತಿದ್ದು , ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆ ಇಂದ ಹೊರಟಿದ್ದಾನೆ. ಬೈಕ್ ಪಾರ್ಕ್ ಮಾಡಿ,, ಫ್ಲೈಓವರ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
2 ತಿಂಗಳ ಹಿಂದೆ ಮದುವೆಯಾಗಿದ್ದ ನವೀನ್ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಬ್ಯಾಟರಾಯನಪುರ ಪೊಲೀಸರು ಆತ್ಮಹತ್ಯೆ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ