ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರದಾನ ಮಾಡಿದರು. ಪುನೀತ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಪ್ರಶಸ್ತಿಯನ್ನು ಸ್ವೀಕರಿಸಿ ಭಾವುಕರಾದರು. ಸಿನಿಮಾ ರಂಗ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಪುನೀತ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಸಿನಿಮಾ ರಂಗದಿಂದ ಇಂಥದ್ದೊಂದು ಗೌರವಕ್ಕೆ ಪಾತ್ರರಾದ ಎರಡನೇ ಗಣ್ಯವ್ಯಕ್ತಿ ಇವರಾಗಿದ್ದಾರೆ. ಕರ್ನಾಟಕ ರತ್ನ ಪ್ರಶಸ್ತಿ ಪ್ರಾರಂಭವಾದಾಗ ಮೊದಲ ಪ್ರಶಸ್ತಿಯನ್ನು ರಾಷ್ಟ್ರಕವಿ ಕುವೆಂಪು ಮತ್ತು ಡಾ.ರಾಜ್ ಕುಮಾರ್ ಅವರಿಗೆ ದೊರೆತಿತ್ತು. ಮೂವತ್ತು ವರ್ಷಗಳ ನಂತರ ಮತ್ತೆ ಸಿನಿಮಾ ರಂಗಕ್ಕೆ ಅದರಲ್ಲೂ ಡಾ.ರಾಜ್ ಕುಟುಂಬಕ್ಕೆ ಈ ಗೌರವ ದೊರೆತಿದೆ. ಹಾಗಾಗಿಯೇ ಡಾ.ರಾಜ್ ಕುಟುಂಬದ ಅನೇಕ ಸದಸ್ಯರು ಈ ಸಮಾರಂಭದಲ್ಲಿ ಹಾಜರಿದ್ದರು. ಕನ್ನಡದ ಡಿಂಡಿಮ – ರಾಜ್ಯೋತ್ಸವದ ಸಂಭ್ರಮ
ಈ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಪುನೀತ್ ಅವರ ನೆಚ್ಚಿನ ನಟರಾಗಿದ್ದ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ , ಹಾಗೂ ಗೆಳೆಯ ಮತ್ತು ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ , ಸುಧಾಮೂರ್ತಿ ಅವರು ಅತಿಥಿಗಳಾಗಿ ಆಗಮಿಸಿದ್ದರು. ಸಚಿವರಾದ ವಿ.ಸುನೀಲ್ ಕುಮಾರ್, ಆರ್.ಅಶೋಕ್, ಮುನಿರತ್ನ, ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
- ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ
- ಉಪಚುನಾವಣಾ ಫಲಿತಾಂಶಕ್ಕೂ ಮುನ್ನ ಸಿಪಿ ಯೋಗೇಶ್ವರ್ ವಿರುದ್ಧ ಮಗನ ದೂರು: ನಕಲಿ ಸಹಿ ಆರೋಪ
- ಸಚಿವ ಸ್ಥಾನ ನನ್ನ ಹಕ್ಕು, ಬೇಡಿಕೆಯಲ್ಲ: ನಿಖರ ಹೇಳಿಕೆ ನೀಡಿದ ‘ಕೈ’ ಶಾಸಕ ನರೇಂದ್ರ ಸ್ವಾಮಿ
- ರಾಜ್ಯಗಳಾದ್ಯಂತ `ED’ ದಾಳಿ: ಲಾಟರಿ ಕಿಂಗ್ ಮಾರ್ಟಿನ್ನ 12.41 ಕೋಟಿ ನಗದು ಜಪ್ತಿ
- ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್ಗಳು ರದ್ದು: ಸರ್ಕಾರದಿಂದ ಸ್ಪಷ್ಟನೆ
More Stories
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ
ಉಪಚುನಾವಣಾ ಫಲಿತಾಂಶಕ್ಕೂ ಮುನ್ನ ಸಿಪಿ ಯೋಗೇಶ್ವರ್ ವಿರುದ್ಧ ಮಗನ ದೂರು: ನಕಲಿ ಸಹಿ ಆರೋಪ
ಸಚಿವ ಸ್ಥಾನ ನನ್ನ ಹಕ್ಕು, ಬೇಡಿಕೆಯಲ್ಲ: ನಿಖರ ಹೇಳಿಕೆ ನೀಡಿದ ‘ಕೈ’ ಶಾಸಕ ನರೇಂದ್ರ ಸ್ವಾಮಿ