ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಂಪುಟ ಪುನಾರಚನೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಬಳಿ ಚರ್ಚೆ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ರಾಜ್ಯ ಸಚಿವ ಸಂಪುಟ ಪುನಾರಚನೆ ನಿಟ್ಟಿನಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದು, ಐದಾರು ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ.
ಸಂಪುಟದಿಂದ ಕೆಲ ಸಚಿವರನ್ನು ಕೈ ಬಿಟ್ಟು ಹೊಸಬರಿಗೆ ಮಣೆ ಹಾಕುವ ಸಾಧ್ಯತೆ ಇದ್ದು ,ಈ ನಿಟ್ಟಿನಲ್ಲಿ ಚರ್ಚಿಸಲು ಮತ್ತೊಮ್ಮೆ ದೆಹಲಿಗೆ ಬರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಎರಡು ತಿಂಗಳ ಬಳಿಕ ಸಚಿವ ಸಂಪುಟ ಪುನಾರ್ಚನೆ ಸಾಧ್ಯತೆ ಇದ್ದು,ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಹೈಕಮಾಂಡ್ ನಿರ್ಧರ ಕೈಗೊಳ್ಳಲಿದೆ .MUDA ಹಗರಣ : ಕಾಂಗ್ರೆಸ್ ಹೈಕಮಾಂಡ್ ನಿಂದ ಸಿದ್ದರಾಮಯ್ಯನವರಿಗೆ ಬೆಂಬಲ
ಮುಡಾ ಅಕ್ರಮ ಆರೋಪ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದ್ದು, ಕೋರ್ಟ್ ತೀರ್ಮಾನ ನೋಡಿಕೊಂಡು ಮತ್ತೆ ದೆಹಲಿಗೆ ಬರುವುದಾಗಿ ಸಿಎಂ ಸಿದ್ದರಾಮಯ್ಯ ವರಿಷ್ಠರಿಗೆ ತಿಳಿಸಿದ್ದಾರೆ .