ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಸಿದ್ದಪಡಿಸಿರುವ ಬೆನ್ನಲ್ಲೇ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ.
ಇತ್ತೀಚೆಗೆ ಸಚಿವ ಸಿಟಿ ರವಿ ಜನಸಂಖ್ಯಾ ನಿಯಂತ್ರಣ ಮಸೂದೆ ರಾಜ್ಯದಲ್ಲೂ ಜಾರಿಯಾಗಬೇಕು ಎಂದಿದ್ದರು. ಇದರ ಬೆನ್ನಲ್ಲೀಗ ದಾವಣಗೆರೆಯಲ್ಲಿ ಬುಧವಾರ ಸಚಿವ ಭೈರತಿ ಬಸವರಾಜ್ ಕೂಡ ಕರ್ನಾಟಕದಲ್ಲಿ ಜನಸಂಖ್ಯಾ ನಿಯಂತ್ರಣ ಮದೂದೆ ಜಾರಿಗೆ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ ಭೈರತಿ ಸುರೇಶ್ , ದೇಶದಲ್ಲಿ ಜನಸಂಖ್ಯೆ ನಿಯಂತ್ರಣ ನೀತಿ ಜಾರಿ ಅತ್ಯಗತ್ಯ. ಭಾರತದಲ್ಲಿ ಈಗ ಜನಸಂಖ್ಯೆ 150 ಕೋಟಿ ದಾಟುತ್ತಿದೆ. ಹೀಗಾದರೆ ಎಲ್ಲರಿಗೂ ಮೂಲಭೂತ ಸೌಲಭ್ಯ ಸಿಗೋದು ಅನುಮಾನ. ಅಮೆರಿಕಾ ಜನಸಂಖ್ಯೆ ಭಾರತಕ್ಕಿಂತ ಕಡಿಮೆ ಇದೆ. ಆದ್ದರಿಂದ ಅಮೆರಿಕಾದಲ್ಲಿ ಎಲ್ಲರಿಗೂ ಸೌಲಭ್ಯಗಳು ಸಿಗುತ್ತವೆ ಎಂದಿದ್ದಾರೆ.
ಕರ್ನಾಟಕದಲ್ಲೂ ಜನಸಂಖ್ಯಾ ನಿಯಂತ್ರಣ ಮಸೂದೆ ಜಾರಿಯಾಗಲಿ. ಇದರ ಸಾಧಕಬಾಧಕ ಚರ್ಚಿಸಿ ಸರ್ಕಾರ ಮುಂದಿನ ದಿನಗಳಲ್ಲಿ ಒಂದು ಸೂಕ್ತ ತೀರ್ಮಾನಕ್ಕೆ ಬರಲಿದೆ. ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಬಿಡುಗಡೆ ಮಾಡಿರುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು.
- ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆಯ ಮುನ್ಸೂಚನೆ
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
More Stories
ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!