ಕರ್ನಾಟಕದ ಭದ್ರಾ ಮೇಲ್ದಂಡೆ ಈಗ ರಾಷ್ಟ್ರೀಯ ಯೋಜನೆ – 5,300 ಕೋಟಿ ರು ಅನುದಾನ

river , budget , project
Karnataka's Bhadra Upper Bank is now a National Project - Rs 5,300 crore grant ಕರ್ನಾಟಕದ ಭದ್ರಾ ಮೇಲ್ದಂಡೆ ಈಗ ರಾಷ್ಟ್ರೀಯ ಯೋಜನೆ – 5,300 ಕೋಟಿ ರು ಅನುದಾನ #thenewsnap #unionbudget #statebudget #badra #kannadanews #india #latestnews #budget

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್‌ ನೀಡಿದೆ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲಾಗಿದೆ.

ಈ ಮೂಲಕ ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಹೊರಹೊಮ್ಮಿದೆ.6 ಐಎಎಸ್‌, 4 ಮಂದಿ ಐಪಿಎಸ್‌ ವರ್ಗಾವಣೆ 

ಬಜೆಟ್‌ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್‌ ಈ ಯೋಜನೆಗೆ 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಪ್ರಕಟಿಸಿದರು.

ಈ ಹಿಂದೆ ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿ, ‘‘ಯೋಜನೆಗೆ 23,000 ಕೋಟಿ ರೂ. ವೆಚ್ಚವಾಗಲಿದೆ, ಸದ್ಯ 16,000 ಕೋಟಿ ರೂ. ವೆಚ್ಚದ ಕೆಲಸ ಬಾಕಿ ಇದೆ. ರಾಷ್ಟ್ರೀಯ ಯೋಜನೆ ಘೋಷಣೆ ನಂತರ ಯೋಜನೆಯಡಿ ಬಾಕಿಯಿರುವ ಮೊತ್ತದಲ್ಲಿಶೇ. 60ರಷ್ಟನ್ನು ಕೇಂದ್ರ ಭರಿಸಲಿದೆ. ಕೇಂದ್ರದಿಂದ ಯೋಜನೆಗೆ 5,300 ಕೋಟಿ ರೂ. ಸಿಗುವ ನಿರೀಕ್ಷೆ ಇದೆ,’’ ಎಂದು ತಿಳಿಸಿದ್ದರು.

Leave a comment

Leave a Reply

Your email address will not be published. Required fields are marked *

error: Content is protected !!