ಮಂಗಳವಾರ ಬೆಂಗಳೂರಿನ ಕಂದಾಯ ಭವನದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ. ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ 5 ಲಕ್ಷ ರು ಲಂಚ ಸ್ವೀಕಾರ ಮಾಡುವಾಗ ಈ ದಾಳಿ ನಡೆದಿದೆ.ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ : ತಾಯಿ, ಅಣ್ಣ ಕಳೆದುಕೊಂಡಿದ್ದ ನಟನಿಗೆ ಆಘಾತ.
ಖಾತೆ ಮಾಡಿ ಕೊಡಲು ವರ್ಷಾ ವಡೆಯರ್ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಮಂಗಳವಾರ ಲಂಚ ಸ್ವೀಕಾರ ಮಾಡುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ, ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವರ್ಗಾವಣೆ ವಿವಾದ ವರ್ಷಾ ಒಡೆಯರ್ ಈ ಮೊದಲು ರಾಮನಗರ ಜಿಲ್ಲೆಯ ಕನಕಪುರ ತಹಶೀಲ್ದಾರ್ ಆಗಿದ್ದರು. ಆಗ ಅವರನ್ನು ವರ್ಗಾವಣೆ ಮಾಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹಲವಾರು ಸಂಘಟನೆಗಳು ಅವರ ಪರವಾಗಿ ನಿಂತು ಬೆಂಬಲ ನೀಡಿದ್ದವು, ಸಾಮಾಜಿಕ ಜಾಲತಾಣದಲ್ಲಿಯೂ ಅವರನ್ನು ಬೆಂಬಲಿಸಿ ಅಭಿಯಾನ ನಡೆದಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು