ಬೆಂಗಳೂರು: : ಕಾಶಿಯಾತ್ರೆಗೆ ನೀಡಲಾಗುತ್ತಿರುವ ಸಬ್ಸಿಡಿ ದರವನ್ನು 5 ಸಾವಿರ ರೂ.ಗಳಿಂದ 7,500 ರೂ.ಗಳಿಗೆ ಹೆಚ್ಚಿಸಲಾಗಿದೆ.
ಮುಂದಿನ ದಿನಗಳಲ್ಲಿ ರಾಜ್ಯದ ಸಾಮಾನ್ಯ ಭಕ್ತರಿಗೂ ಯಾತ್ರೆಗೆ ತೆರಳಲು ಅವಕಾಶ ನೀಡಲಾಗುವುದು ಅಂತ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ರಿಯಾಯಿತಿ ದರದ ‘ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ’ ಯೋಜನೆಯಡಿ ಬೆಂಗಳೂರಿನಿಂದ 450 ಪ್ರಯಾಣಿಕರನ್ನು ಹೊತ್ತ ವಿಶೇಷ ರೈಲು ನಗರದ ಯಶವಂತಪುರ ರೈಲ್ವೆ ನಿಲ್ದಾಣದಿಂದ ಶನಿವಾರ ತೆರಳಿತು.
ಈ ರೈಲಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರು, “ಕಾಶಿಯಾತ್ರೆಯ ಸಹಾಯಧನ ಹೆಚ್ಚಿಸುವ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.
ಮುಂದಿನ ಟ್ರಿಪ್ ಆ.12ಕ್ಕೆ ಹೊರಡಲಿದೆ. ರಾಮೇಶ್ವರಂ, ಗಯಾ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅನುವು ಮಾಡಿಕೊಡಲಾಗುವುದು ಅಂತ ಇದೇ ವೇಳೇ ತಿಳಿಸಿದರು.SSCಯಿಂದ 1342 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಒಟ್ಟು ಎಂಟು ದಿನಗಳ ಯಾತ್ರೆಯಲ್ಲಿ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್ ರಾಜ್ ಕ್ಷೇತ್ರಗಳಿಗೆ ತೆರಳಲು ರಾಜ್ಯ ಸರಕಾರವು ಐಆರ್‌ಸಿಟಿಸಿ ಮತ್ತು ಭಾರತೀಯ ರೈಲ್ವೆ ಇಲಾಖೆ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ 2022-23ನೇ ಸಾಲಿನಿಂದ ಈ ಯೋಜನೆ ಕೈಗೊಂಡಿದೆ. ಈ ವಿಶೇಷ ರೈಲಿನಲ್ಲಿಅಡುಗೆ ಮನೆ, ವೈದ್ಯರ ತಂಡ ಇರಲಿದ್ದು ಪ್ರತಿ ಬೋಗಿಯಲ್ಲಿಸಿಸಿ ಕ್ಯಾಮರಾಗಳ ವ್ಯವಸ್ಥೆ ಇದೆ. 100 ಮಂದಿ ರೈಲ್ವೆ ಸಿಬ್ಬಂದಿಗಳು ಇರುತ್ತಾರೆ. ಇವರಿಗಾಗಿಯೇ ಪ್ರತ್ಯೇಕ ಬೋಗಿ ವ್ಯವಸ್ಥೆ ಇದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ