ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅಪರಾಧಿ ಎಂದು ದೆಹಲಿಯ ವಿಶೇಷ ಎನ್ಐಎ ಕೋರ್ಟ್ ತೀರ್ಪು ನೀಡಿದೆ.
ಇದನ್ನು ಓದಿ :ನಟಿ ಚೇತನಾ ಸಾವು : ಆಸ್ಪತ್ರೆಗೆ ಬೀಗ, ವೈದ್ಯರಿಗೆ ನೋಟಿಸ್
2017ರಲ್ಲಿ ಕಾಶ್ಮೀರಿ ಕಣಿವೆಯಲ್ಲಿ ನಡೆದ ಉಗ್ರ ಚಟುವಟಿಕೆಗಳು, ದಾಳಿಗಳಿಗೆ ಆರ್ಥಿಕ ನೆರವು ನೀಡಿರುವ ಪ್ರಕರಣದಲ್ಲಿ ಯಾಸಿನ್ ಮಲಿಕ್ ಕೋರ್ಟ್ ಎದುರು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.
ಯಾಸಿನ್ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಲಾಗಿತ್ತು.
ಯಾಸಿನ್ ಮಾಲಿಕ್ ವಿರುದ್ಧ ಯುಎಪಿಎ ಕಾಯ್ದೆ ಸೆಕ್ಷನ್ 16 (ಭಯೋತ್ಪಾದನೆ), 17 (ಭಯೋತ್ಪಾದನೆಗೆ ನಿಧಿ ಸಂಗ್ರಹ), 18 (ಭಯೋತ್ಪಾದಕ ಕೃತ್ಯಕ್ಕೆ ಸಂಚು) ಹಾಗೂ 20 (ಭಯೋತ್ಪಾದಕ ಸಂಘಟನೆಯ ಸದಸ್ಯನಾಗಿರುವುದು), ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಸೆಕ್ಷನ್ 120–ಬಿ (ಅಪರಾಧ ಸಂಚು) ಮತ್ತು ಭಾರತೀಯ ದಂಡಸಂಹಿತೆಯ 124–ಎ (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿತ್ತು. ನ್ಯಾಯಾಲಯದ ಎದುರು ತನ್ನ ಮೇಲಿನ ಆರೋಪಗಳನ್ನು ಯಾಸಿನ್ ಮಲಿಕ್ ವಿರೋಧಿಸಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ