ಕಾಶ್ಮೀರಿ ಹಿಂದೂಗಳ ಹಂತಕ ಯಾಸಿನ್ ಮಲಿಕ್ ಅಪರಾಧ ಸಾಬೀತು; ಮೇ.25ರಂದು ಶಿಕ್ಷೆ ಪ್ರಕಟ

Team Newsnap
1 Min Read
Yasin Malik death sentence plea: High Court notice ಯಾಸಿನ್ ಮಲಿಕ್‍ ಮರಣದಂಡನೆಗೆ ಮನವಿ : ಹೈಕೋರ್ಟ್ ನೋಟಿಸ್

ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅಪರಾಧಿ ಎಂದು ದೆಹಲಿಯ ವಿಶೇಷ ಎನ್​​ಐಎ ಕೋರ್ಟ್ ತೀರ್ಪು ನೀಡಿದೆ.

ಇದನ್ನು ಓದಿ :ನಟಿ ಚೇತನಾ ಸಾವು : ಆಸ್ಪತ್ರೆಗೆ ಬೀಗ, ವೈದ್ಯರಿಗೆ ನೋಟಿಸ್

2017ರಲ್ಲಿ ಕಾಶ್ಮೀರಿ ಕಣಿವೆಯಲ್ಲಿ ನಡೆದ ಉಗ್ರ ಚಟುವಟಿಕೆಗಳು, ದಾಳಿಗಳಿಗೆ ಆರ್ಥಿಕ ನೆರವು ನೀಡಿರುವ ಪ್ರಕರಣದಲ್ಲಿ ಯಾಸಿನ್ ಮಲಿಕ್ ಕೋರ್ಟ್​ ಎದುರು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.

ಯಾಸಿನ್​ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಲಾಗಿತ್ತು.
ಯಾಸಿನ್​ ಮಾಲಿಕ್ ವಿರುದ್ಧ ಯುಎಪಿಎ ಕಾಯ್ದೆ ಸೆಕ್ಷನ್ 16 (ಭಯೋತ್ಪಾದನೆ), 17 (ಭಯೋತ್ಪಾದನೆಗೆ ನಿಧಿ ಸಂಗ್ರಹ), 18 (ಭಯೋತ್ಪಾದಕ ಕೃತ್ಯಕ್ಕೆ ಸಂಚು) ಹಾಗೂ 20 (ಭಯೋತ್ಪಾದಕ ಸಂಘಟನೆಯ ಸದಸ್ಯನಾಗಿರುವುದು), ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಸೆಕ್ಷನ್ 120–ಬಿ (ಅಪರಾಧ ಸಂಚು) ಮತ್ತು ಭಾರತೀಯ ದಂಡಸಂಹಿತೆಯ 124–ಎ (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿತ್ತು. ನ್ಯಾಯಾಲಯದ ಎದುರು ತನ್ನ ಮೇಲಿನ ಆರೋಪಗಳನ್ನು ಯಾಸಿನ್​ ಮಲಿಕ್ ವಿರೋಧಿಸಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Share This Article
Leave a comment