ಕಾಶ್ಮೀರ ಹತ್ಯಾಕಾಂಡ – ಮೂರು ಬೇಡಿಕೆ ಜೊತೆ ಮರು ತನಿಖೆಗಾಗಿ ಸುಪ್ರೀಂಗೆ ಅರ್ಜಿ

Team Newsnap
1 Min Read

ಬಾಲಿವುಡ್ ಚಲನಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಬಿಡುಗಡೆಯ ನಂತರ 1990ರಲ್ಲಿ ಕಾಶ್ಮೀರ ಪಂಡಿತರ ಹತ್ಯಾಕಾಂಡದ ಕುರಿತು ಮರು ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಕಾಶ್ಮೀರ ಪಂಡಿತರ ಸಂಘಟನೆ ʼರೂಟ್‌ ಇನ್‌ ಕಾಶ್ಮೀರ್‌ʼ ಸುಪ್ರೀಂ ಕೋರ್ಟ್‌ಗೆ ಕ್ಯುರೇಟಿವ್‌ ಅರ್ಜಿಯನ್ನು ಸಲ್ಲಿಸಿದೆ.

2017ರಲ್ಲಿ ವಜಾಗೊಂಡಿದ್ದ ಪ್ರಕರಣಕ್ಕೆ ಈಗ ಮರುಜೀವ ಬಂದಿದೆ.

ಕೇವಲ ಊಹೆಯ ಆಧಾರದಲ್ಲಿ ಆರಂಭಿಕ ಹಂತದಲ್ಲಿ ರಿಟ್ ಅರ್ಜಿಯನ್ನು ವಜಾಗೊಳಿಸಿರುವುದು ಸರಿಯಲ್ಲ. 2007 ರ ಜಪಾನಿ ಸಾಹೂ ವರ್ಸಸ್ ಚಂದ್ರ ಶೇಖರ್ ಮೊಹಂತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ “ಅಪರಾಧ ಎಂದಿಗೂ ಸಾಯುವುದಿಲ್ಲ” ಎಂದು ಹೇಳಿದೆ. ಹೀಗಾಗಿ ಮತ್ತೊಮ್ಮೆ ಅರ್ಜಿಯನ್ನು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದೆ.

ಅರ್ಜಿಯಲ್ಲಿ ಮೂರು ಬೇಡಿಕೆಯನ್ನು ಕೋರ್ಟ್‌ ಮುಂದೆ ಇರಿಸಲಾಗಿದೆ.

1) ಈ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸೀನ್‌ ಮಲಿಕ್‌ ಮತ್ತು ಬಿಟ್ಟಾ ಕರಾಟೆಯನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಬೇಕು.

2) ಹತ್ಯಾಕಾಂಡದ ಸಂಪೂರ್ಣ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕು.

3) ಈ ಘಟನೆಯ ತನಿಖೆಗೆ ಸ್ವತಂತ್ರ ತನಿಖಾ ಆಯೋಗವನ್ನು ರಚಿಸಲು ಆದೇಶ ನೀಡಬೇಕು ಎಂದು ಬೇಡಿಕೆ ಇಡಲಾಗಿದೆ.

Share This Article
Leave a comment