ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನರಾದ ಹಿನ್ನೆಲೆಯಲ್ಲಿ ಕತ್ತಿ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಬುಧವಾರ ಬೆಳಗ್ಗೆ ಬೆಳಗಾವಿ ಏರ್ ಲಿಪ್ಟ್ ಮಾಡಿದ ನಂತರ ಬೆಳಗಾವಿಯಿಂದ ಹುಟ್ಟೂರು ಬೆಲ್ಲದ ಬಾಗೇವಾಡಿಗೆ ತೆಗೆದುಕೊಂಡು ಹೋಗಲಾಗುವುದು.
ಸಂಕೇಶ್ವರ್ ದ ವಿಶ್ವನಾಥ್ ಸಕ್ಕರೆ ಕಾರ್ಖಾನೆ ಬಯಲಿನಲ್ಲಿ ಮಧ್ಯಾಹ್ನ 2 ಗಂಟೆಯವರಿಗೆ ಅಂತಿಮ ದರ್ಶನಕ್ಕೆ ಇಡಲಾಗುವುದು.
ನಂತರ ಹುಟ್ಟರೂ ಬೆಲ್ಲದ ಬಾಗೇವಾಡಿಯಲ್ಲಿ ಕತ್ತಿ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ, 5. ಗಂಟೆಗೆ ಅವರ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು.
ಸಚಿವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶಾಲೆ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.
ಸಚಿವ ಉಮೇಶ್ ಕತ್ತಿಯವರ ಸ್ವಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಕತ್ತಿಯವರ ಸಾವಿನ ಸುದ್ದಿ ಕೇಳಿ, ಮಧ್ಯರಾತ್ರಿಯೇ ಜನರು ಆಗಮಿಸ್ತಿದ್ದಾರೆ, ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ಶೋಕ ಮಡುಗಟ್ಟಿದೆ.
More Stories
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ