ಕಾವೇರಿ ವಿವಾದ : ಇಂದು ರಾಜ್ಯ ಸರ್ಕಾರದಿಂದ ಸರ್ವಪಕ್ಷ ಸಭೆ

Team Newsnap
1 Min Read

ಬೆಂಗಳೂರು : ನೀರು ನಿಯಂತ್ರಣಾ ಸಮಿತಿ CWRC ಆದೇಶದಂತೆ ತಮಿಳುನಾಡಿಗೆ (TamilNadu) ಮತ್ತೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ (Karnataka Government) ಇಕ್ಕಟ್ಟಿಗೆ ಸಿಲುಕಿದೆ.

ರಾಜ್ಯ ಸರ್ಕಾರ ಈ ಹಿನ್ನೆಲೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುವ ಸಲುವಾಗಿ ವಿಶೇಷ ಸರ್ವಪಕ್ಷ ಸಭೆಗೆ ಕರೆದಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಇಂದು ಮಧ್ಯಾಹ್ನ 12:30ಕ್ಕೆ ವಿಶೇಷ ಸರ್ವಪಕ್ಷ ಸಭೆ ನಡೆಯಲಿದೆ.

ವಿಪಕ್ಷಗಳ ಸದನ ನಾಯಕರು, ಕಾವೇರಿ ಜಲಾನಯನ ಕ್ಷೇತ್ರಗಳ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ ಸಿಎಂಗಳಿಗೆ ಸಭೆಗೆ ಬರುವಂತೆ ಆಹ್ವಾನಿಸಿದ್ದಾರೆ.

ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಬಗ್ಗೆ ಮುಹೂರ್ತ ನಿಗದಿ ಮಾಡುವ ಸಾಧ್ಯತೆ ಇದೆ.5 ಕೋಟಿ ರು ವಂಚನೆ : ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಸಿಸಿಬಿ ವಶಕ್ಕೆ

ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಸಭೆ ಬಳಿಕ ದೆಹಲಿಗೆ ತೆರಳಲಿದ್ದು ,ಕೇಂದ್ರದ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿ ಮನವರಿಕೆ ಮಾಡಿ ಕೇಂದ್ರದ ಮಧ್ಯಪ್ರವೇಶಕ್ಕೆ ಒತ್ತಾಯಿಸುವ ಸಾಧ್ಯತೆ ಅಪಾರವಾಗಿದೆ.

Share This Article
Leave a comment