November 21, 2024

Newsnap Kannada

The World at your finger tips!

mandya strike kaveri

ಕಾವೇರಿ ಕೂಗು-ಜಿಲ್ಲಾ ರೈತ ರಕ್ಷಣಾ ಸಮಿತಿ 2ನೇ ದಿನಕ್ಕೆ ಕಾಲಿಟ್ಟ ಧರಣಿ

Spread the love

ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನದಿ ಪ್ರಾಧಿಕಾರ ಆದೇಶ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ರೈತ ರಕ್ಷಣಾ ಸಮಿತಿ ನಡೆಸುತ್ತಿರುವ ಪ್ರತಿಭಟನಾ ಧರಣಿ ಎರಡನೇ ದಿನವೂ ಮುಂದುವರೆದಿದ್ದು ಬಾಯಿ ಬಡಿದು ಕೊಂಡು ಕಾವೇರಿ ನದಿ ನೀರಿನ ವಿಚಾರದಲ್ಲಿ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿದರು.

ನಗರದ ಸರ್ ಎಂ.ವಿ. ಪ್ರತಿಮೆ ಎದುರು ರೈತರು, ಕನ್ನಡ ಹೋರಾಟಗಾರರು ಸೇರಿ ವಿವಿಧ ಸಂಘ-ಸಂಸ್ಥೆಗಳ ಕಾರ್ಯಕರ್ತರು ಅಯ್ಯಯ್ಯೋ ಅನ್ಯಾಯ ಎಂದು ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.

ನೀರು ಬಿಡುಗಡೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸಂಕಷ್ಟ ಕಾಲದಲ್ಲಿ ಮಧ್ಯ ಪ್ರವೇಶ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ ಪ್ರತಿಭಟನಾಕಾರರು, ಸಂಸದೆ ಸುಮಲತಾ ಅಂಬರೀಶ್ ಮತ್ತು ಜಿಲ್ಲೆಯ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಒತ್ತಡ ತಂತ್ರದ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಪ್ರಾಧಿಕಾರ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಆದೇಶ ಮಾಡಿರುವುದು ಅವ್ಯೆಜ್ಞಾನಿಕ, ಕಾವೇರಿ ಕೊಳ್ಳದ ಜಲಾಶಯಗಳಿಂದ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಕೆ.ಟಿ. ಶ್ರೀಕಂಠೇಗೌಡ, ಸುನಂದಾ ಜಯರಾಂ, ಬೇಕ್ರಿ ರಮೇಶ್, ಕೆ ಬೋರಯ್ಯ, ಕೀಲಾರ ಕೃಷ್ಣ, ಕನ್ನಡ ಸೇನೆ ಮಂಜುನಾಥ್, ಜಯ ಕರ್ನಾಟಕ ಯೋಗಣ್ಣ, ರೈತ ಸಂಘದ ಇಂಡುವಾಳು ಚಂದ್ರಶೇಖರ್.ಎಂ.ಎಲ್. ತುಳಸೀದರ್, ಇಂಡುವಾಳು ಬಸವರಾಜ್, ಕರವೇ ಅಧ್ಯಕ್ಷ ಕೆ.ಟಿ. ಶಂಕರೇಗೌಡ ನೇತೃತ್ವ ವಹಿಸಿದ್ದರು.

Copyright © All rights reserved Newsnap | Newsever by AF themes.
error: Content is protected !!