ಕಾವೇರಿ ನದಿ ನೀರು ಹೆಚ್ಚಾದಂತೆಲ್ಲಾ ಕೊಳ್ಳೇಗಾಲ ತಾಲೂಕಿನ 8ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಭೀತಿ ಆವರಿಸುತ್ತಿದೆ. ಈಗಾಗಲೇ ಕೆಲವು ಕಡೆ ಜಮೀನುಗಳು ಜಲಾವೃತವಾಗಿ ರೈತರಲ್ಲಿ ಆತಂಕ ಮೂಡಿಸಿದೆ.
ನದಿಯಲ್ಲಿ ಬಟ್ಟೆ ಒಗೆಯುವುದು, ಸ್ನಾನ ಮಾಡುವುದು, ಹಸು ತೊಳೆಯುವುದು, ಈಜುವುದು ಇನ್ನಿತರ ಚಟುವಟಿಕೆಗಳನ್ನು ಮಾಡಬಾರದು’ ಎಂದು ಈಗಾಗಲೇ ಜಿಲ್ಲಾಡಳಿತ ಸೂಚಿಸಿದೆ.
ನೆರೆ ಆತಂಕದಲ್ಲಿರುವ ಗ್ರಾಮಗಳಿಗೆ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಧರ್ ಭೇಟಿ ನೀಡಿದ ವೇಳೆ ನೀರಿನ ಮಟ್ಟ ಏರುತ್ತಿದ್ದರೂ, ಗ್ರಾಮಸ್ಥರು ನದಿ ನೀರಿನಲ್ಲಿ ಬಟ್ಟೆ ತೊಳೆಯುವುದು, ನೀರನ್ನು ಸಂಗ್ರಹಿಸುವುದನ್ನು ಕಂಡು ಇಒಗೆ ಫೋನಾಯಿಸಿ ಕುಡಿಯುವ ನೀರು ಸೌಲಭ್ಯ ಕಲ್ಪಿಸುವಂತೆ ಸೂಚಿಸಿದ್ದಾರೆ.
ದಾಸನಪುರ ಗ್ರಾಮದಲ್ಲಿ ಕಾವೇರಿ ನೀರು ಹರಿಯುತ್ತದೆ. ಆದರೆ ನಮಗೆ ಸರಿಯಾಗಿ ಕುಡಿಯುವ ನೀರು ಪೂರೈಕೆ ಆಗುವುದಿಲ್ಲ. ಹೀಗಾಗಿ ನದಿಗೆ ಬಂದು ನೀರು ತೆಗೆದುಕೊಳ್ಳುತ್ತೇವೆ. ಪಾತ್ರೆ, ಬಟ್ಟೆಗಳನ್ನು ನದಿಗೆ ಬಂದು ತೊಳೆಯುತ್ತೇವೆ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡಿದರು. ಇದಕ್ಕೆ ಸ್ಪಂಧಿಸಿದ ನ್ಯಾಯಾದೀಶರು ಅಗತ್ಯ ಮೂಲಸೌಕರ್ಯ ಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸುವುದಾಗಿ ತಿಳಿಸಿ, ನದಿ ಬಳಿ ಯಾರೂ ದೈನಂದಿನ ಕಾರ್ಯ ಮಾಡಬೇಡಿ ಎಂದು ಮನವಿ ಮಾಡಿದರು. ಇದನ್ನು ಓದಿ – ತಂದೆ – ತಾಯಿ ಕಳೆದುಕೊಂಡ ಮಕ್ಕಳಿಗೆ ನೆರವು ನೀಡಿ ಮಾನವೀಯತೆ ಮೆರೆದ ಮಹಿಳಾ ಪೊಲೀಸ್!
ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿರುವುದರಿಂದ ಜಿಲ್ಲಾಡಳಿತ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ, ವೆಸ್ಲಿ ಸೇತುವೆ, ಶಿವನಸಮುದ್ರ ಸಮೂಹ ದೇವಾಲಯಗಳು, ದರ್ಗಾ ವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ಶ್ರೀರಂಗಪಟ್ಟಣದ ಸಂಗಮದಲ್ಲಿ ಕಾವೇರಿ ನದಿಯಲ್ಲಿ ಈಜಲು ತೆರಳಿದ ಇಬ್ಬರು ಯುವಕರು ನೀರಲ್ಲಿ ಕೊಚ್ಚಿ ಹೋದ ಬೆನ್ನಲ್ಲೇ ಜಿಲ್ಲಾಡಳಿತ ಈ ನಿರ್ಧಾರ ತೆಗೆದುಕೊಂಡಿದೆ.
ಕೆಆರ್‌ಎಸ್ ಜಲಾಶಯದಿಂದ 70 ಸಾವಿರ ಕ್ಯೂಸೆಕ್ ಹಾಗೂ ಕಬಿನಿಯಿಂದ 30 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿಬಿಡಲಾಗಿದೆ ಜೊತೆಗೆ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಪರಿಣಾಮ ಹೊಗೆನಕಲ್‌ನಲ್ಲಿ ಕಾವೇರಿ ರುದ್ರರಮಣೀಯವಾಗಿ ಹರಿಯುತ್ತಿದ್ದಾಳೆ. ನೀರಿನ ಮಟ್ಟ ಅಪಾಯದ ಸ್ಥಿತಿ ತಲುಪಿರುವುದರಿಂದ ತೆಪ್ಪ ಸವಾರಿಯನ್ನು ನಿಷೇಧಿಸಲಾಗಿದೆ.
ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಪೋಟೊ ವಿಡಿಯೋ ಮಾಡದಂತೆ ನಿನ್ನೆ ಹೊರಡಿಸಿದ್ದ ಆದೇಶವನ್ನು ಸರ್ಕಾರ ನಿನ್ನೆ ತಡರತ್ರಯೇ ವಾಪಸ್ ಪಡೆದಿದೆ.
ಸರ್ಕಾರದ ಈ ನಿರ್ಧಾರಕ್ಕೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ತನ್ನ ಆದೇಶವನ್ನು ವಾಪಸ್ ಪಡೆದಿದೆ.
ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಆಗಮಿಸುವುದು ಸಾಮಾನ್ಯ. ಈ ಸಂದರ್ಭದಲ್ಲಿ ಕೆಲವು ಖಾಸಗಿ ವ್ಯಕ್ತಿಗಳು ತೆಗೆಯುವ ಫೋಟೋ ಅಥವಾ ವಿಡಿಯೋಗಳು ಸಾಮಾಜಿಕವಾಗಿ ದುರ್ಬಳಕೆ ಆಗುತ್ತಿವೆ.
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ತೆಗೆದ ಫೋಟೋ ಇಲ್ಲವೇ ವಿಡಿಯೋ ಹರಿಬಿಡುತ್ತಾರೆ. ಇದರಿಂದ ಸರ್ಕಾರದ ಘನತೆಗೆ ಧಕ್ಕೆ ಉಂಟಾಗುತ್ತದೆ.
ಹೀಗಾಗಿ ಸರ್ಕಾರಿ ಎಲ್ಲಾ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ವಿಡಿಯೋ ಮಾಡುವುದು ಇಲ್ಲವೇ ಫೋಟೊ ತೆಗೆಯುವುದನ್ನು ನಿಷೇಧಿಸಬೇಕು ಎಂದು ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.
ಈ ಮನವಿಯನ್ನು ಪುರಸ್ಕರಿಸಿ ಸರ್ಕಾರ ಹೊಸ ಆದೇಶ ಹೊರಡಿಸಿತ್ತು. ಇದಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶ ಹಿಂದಕ್ಕೆ ಪಡೆಯಲಾಗಿದೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು