ಉತ್ತರಾಖಂಡದಲ್ಲಿ ಭಾರೀ ಮಳೆ ಹಿನ್ನೆಲೆ ಕೇದಾರನಾಥ ಯಾತ್ರೆ ಸ್ಥಗಿತ

Team Newsnap
0 Min Read

ಉತ್ತರಾಖಂಡದಲ್ಲಿ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಭಾರೀ ಮಳೆಯಿಂದಾಗಿ, 4 ರಾಜ್ಯ ರಸ್ತೆಗಳು ಮತ್ತು 10 ಲಿಂಕ್ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಮಂದಾಕಿನಿ ಮತ್ತು ಅಲಕನಂದಾ ನದಿಗಳಲ್ಲಿ ನೀರಿನ ಹರಿವು ಗಣನೀಯವಾಗಿ ಹೆಚ್ಚಾಗಿದೆ.

ಪ್ರತಿಕೂಲ ಹವಾಮಾನದಿಂದಾಗಿ ಜಿಲ್ಲಾಡಳಿತವು ಸೋನ್ಪ್ರಯಾಗ್ ಮತ್ತು ಗೌರಿಕುಂಡ್ ನಲ್ಲಿ ಕೇದರಾನಾಥ ಯಾತ್ರಿಕರನ್ನು ನಿಲ್ಲಿಸಿದೆ.

ಉತ್ತರಾಖಂಡ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಅಬ್ಬರದ ಮಳೆಯಾಗಲಿದೆ, ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಇಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ.

Share This Article
Leave a comment