April 17, 2025

Newsnap Kannada

The World at your finger tips!

arvindh kejriwal

“ಈ ಜನ್ಮದಲ್ಲಿ ಸೋಲಿಸಲಾಗದು” ಎಂದಿದ್ದ ಕೇಜ್ರಿವಾಲ್‌ಗೆ ಚುನಾವಣೆಯಲ್ಲಿ ಭಾರಿ ಹಿನ್ನಡೆ

Spread the love

-ದೆಹಲಿಯಲ್ಲಿ ಬಿಜೆಪಿ ಭರ್ಜರಿ ಗೆಲುವು

ದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿಗೆ (AAP) ಭಾರೀ ಹಿನ್ನಡೆಯಾದ ಬೆನ್ನಲ್ಲೇ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಹಳೆಯ ಹೇಳಿಕೆ ಮತ್ತೊಮ್ಮೆ ಸುದ್ದಿಯಾಗಿದೆ. 2023ರಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ, “ಈ ಜನ್ಮದಲ್ಲಿ ಬಿಜೆಪಿಗೆ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ” ಎಂದು ಘೋಷಿಸಿದ್ದ ಕೇಜ್ರಿವಾಲ್, ಈಗ ತೀವ್ರ ಹಿನ್ನಡೆ ಅನುಭವಿಸಿದ್ದಾರೆ.

ಆ ವೇಳೆಯಲ್ಲಿ ಕೇಜ್ರಿವಾಲ್ ಅವರು, “ಬಿಜೆಪಿಯ ಉದ್ದೇಶ ನಮ್ಮ ಸರ್ಕಾರವನ್ನು ಪತನಗೊಳಿಸುವುದಾಗಿದೆ. ನರೇಂದ್ರ ಮೋದಿಜಿ ದೆಹಲಿಯಲ್ಲಿ ಸರ್ಕಾರ ರಚಿಸಲು ಬಯಸುತ್ತಾರೆ. ಆದರೆ ಚುನಾವಣೆಯ ಮೂಲಕ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂಬುದು ಅವರಿಗೆ ತಿಳಿದಿದೆ. ಮೋದಿಜಿಗೆ ದೆಹಲಿಯಲ್ಲಿ ನಮ್ಮನ್ನು ಸೋಲಿಸಲು ಇನ್ನೊಂದು ಜನ್ಮ ಬೇಕು” ಎಂದಿದ್ದರು.

ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ತೀವ್ರ ಪೈಪೋಟಿಯ ಬಳಿಕ ದೆಹಲಿಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, 27 ವರ್ಷಗಳ ನಂತರ ದೆಹಲಿಯಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. ಎಎಪಿಯ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನವಾಗಿದ್ದು, ಕೇಜ್ರಿವಾಲ್ ಅವರ ಸೋಲಿನ ಬಳಿಕ ಪಕ್ಷ ಕಚೇರಿಯಲ್ಲಿ ಮೌನ ಮಡುಗಟ್ಟಿದೆ.ಇದನ್ನು ಓದಿ –ತೋರಿಕೆಯ ‘ಅಟೆಂಡೆನ್ಸ್’ ಬದಲು ಆತ್ಮೀಯತೆಯ “ಪ್ರೆಸೆನ್ಸ್” ಇರಲಿ……

ಕೇಜ್ರಿವಾಲ್ ಅವರು ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು, ಆದರೆ ಅವರ ವಿರುದ್ಧ ಬಿಜೆಪಿಯ ಪರ್ವೇಶ್ ವರ್ಮಾ 1,800 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಫಲಿತಾಂಶದಿಂದ ಬಿಜೆಪಿಯಲ್ಲಿ ಸಂಭ್ರಮ ಮನೆಮಾಡಿದ್ದು, ದೆಹಲಿಯ ರಾಜಕೀಯ ಸಮೀಕರಣದಲ್ಲಿ ಮಹತ್ವದ ಬದಲಾವಣೆ ತಂದುಕೊಟ್ಟಿದೆ.

Copyright © All rights reserved Newsnap | Newsever by AF themes.
error: Content is protected !!